- Advertisement -
- Advertisement -



ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರಕ್ಕೆ ಕೌಂಟರ್ಗಳನ್ನು ತೆರೆಯಲಾಗಿದೆ. ಸಚಿವಾಲಯದಿಂದ ಗ್ರಾಮ ಪಂಚಾಯಿತಿ ಕಚೇರಿ ವರೆಗೂ ಲಂಚ ಇಲ್ಲದೆ ಕೆಲಸ ಕಾರ್ಯಗಳು ನಡೆಯುವುದಕ್ಕೆ ಸಾಧ್ಯವಿಲ್ಲ ಎಂಬಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸರಕಾರ ಕಮಿಷನ್ ಮಾಫಿಯಗೆ ಬೆಂಬಲ ಕೊಡುತ್ತಿದೆ. ಕಮಿಷನ್ ಮಾಫಿಯ ಏಜೆಂಟರ ಮೂಲಕ ರಾಜ್ಯದಲ್ಲಿ ಇವರು ಸರಕಾರದ ಆಡಳಿತ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಏಕೈಕ ಕಾರಣಕ್ಕೆ ಸಿದ್ದರಾಮಯ್ಯನವರು ಇದೆಲ್ಲವನ್ನೂ ನೋಡಿ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಆರೋಪಿಸಿದರು.
- Advertisement -








