Monday, June 8, 2026
spot_imgspot_img
spot_imgspot_img

ವಿಟ್ಲ : ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲದಲ್ಲಿ “ವಿಕಾಸ” ಸಾಂಸ್ಕೃತಿಕ ಸಂಭ್ರಮ – 2024

- Advertisement -
- Advertisement -

ವಿಟ್ಲ : ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ ಆಂತರಿಕ ಗುಣಮಟ್ಟ ಭರವಸ ಕೋಶ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ದಿನಾಂಕ 28/09/2024 ರಂದು ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ” ವಿಕಾಸ’ ಸಾಂಸ್ಕೃತಿಕ ಸಂಭ್ರಮ – 2024 ನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಪದ್ಮನಾಭ ಇವರು ವಿದ್ಯಾರ್ಥಿಗಳಿಗೆ ಪಠ್ಯ ಚಟುವಟಿಕೆಗಳು ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆಗಳು ಅಷ್ಟೇ ಮುಖ್ಯ. ಕಲಾಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಕ್ರಿಯಾಶೀಲವಾಗಿ ಭಾಗವಹಿಸುವುದರಿಂದ ಮಾನಸಿಕ ಸ್ಥಿರತೆ, ಬೌದ್ಧಿಕ ಕ್ಷಮತೆ ವೃದ್ಧಿಗೊಳ್ಳುತ್ತದೆ. ವಿದ್ಯಾರ್ಥಿಗಳು ಇಂತಹ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಅವರ ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳುವುದರ ಜೊತೆಗೆ ವ್ಯಕ್ತಿತ್ವ ವಿಕಸನವನ್ನು ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಜಾನಪದ ನೃತ್ಯ, ಜಾನಪದ ಗೀತೆ, ಮೂಕಾಭಿನಯ, ರಂಗೋಲಿ ಹಾಗೂ ಚಿತ್ರ ಬಿಡಿಸುವುದು ಮುಂತಾದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

- Advertisement -

Related news

error: Content is protected !!