Sunday, June 14, 2026
spot_imgspot_img
spot_imgspot_img

ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಶೋಕ ಜನಮನ 2025 ಕಾರ್ಯಕ್ರಮದ ಗ್ರಾಮ ಪ್ರಚಾರ ಸಭೆ

- Advertisement -
- Advertisement -

ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಅಕ್ಟೋಬರ್ 20 ರಂದು ದೀಪಾವಳಿ ಪ್ರಯುಕ್ತ ನಡೆಯುವ ಅಶೋಕ ಜನಮನ 2025 ಇದರ ಗ್ರಾಮ ಪ್ರಚಾರ ಸಭೆಗೆ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ ಮಾಣಿಲ ಇಲ್ಲಿ ಚಾಲನೆ ನೀಡಲಾಯಿತು.

ದೇವಸ್ಥಾನದ ಧರ್ಮದರ್ಶಿ ಶ್ರೀ ಕೃಷ್ಣ ಗುರೂಜಿಯವರು ಚಾಲನೆ ನೀಡಿದರು. ಈ ವೇಳೆ ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ಅಳಿಕೆ ಗ್ರಾಪಂ ಅಧ್ಯಕ್ಷ ಪದ್ಮನಾಭ ಪೂಜಾರಿ, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್, ದೇವಸ್ಥಾನದ ಮೊಕ್ತೇಸರ ಎಂ ಕೆ ಕುಕ್ಕಾಜೆ, ವಿಷ್ಣು ಭಟ್ ಕೆಮ್ಮುಂಜೆ, ಮೋಹನ್ ಗುರ್ಜಿನಡ್ಕ, ರಾಮಣ್ಣ ಪಿಲಿಂಜ, ಮಾಣಿಲ ಗ್ರಾಪಂ ಅಧ್ಯಕ್ಷ ಶ್ರೀಧರ್ ಮಾಣಿಲ ಉಪಸ್ಥಿತರಿದ್ದರು. ಪ್ರವೀಣ್ ಸಣ್ಣಗುತ್ತು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!