- Advertisement -





- Advertisement -
ಚಿಕ್ಕಬಳ್ಳಾಪುರ: ಮಳೆಗಾಗಿ ಮಕ್ಕಳ ಅಣಕು ಮದುವೆ ಮಾಡಿಸಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಗಳಕೊಪ್ಪೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಮಗಳಕೊಪ್ಪೆ ಗ್ರಾಮದ ಇಬ್ಬರು ಬಾಲಕರಲ್ಲಿ ಒಬ್ಬ ಹುಡುಗನಿಗೆ ವಧು ವೇಷ ಹಾಕಿ ಮತ್ತೋರ್ವ ಹುಡುಗನಿಗೆ ವರನ ವೇಷ ಹಾಕಿ ಶಾಸ್ತ್ರೋಕ್ತವಾಗಿ ಅರ್ಚಕರ ನೇತೃತ್ವದಲ್ಲಿ ಗ್ರಾಮಸ್ಥರು ಅಣಕು ಮದುವೆ ಮಾಡುವ ಮೂಲಕ ಮಳೆಗಾಗಿ ಮೊರೆಯಿಟ್ಟಿದ್ದಾರೆ.
ಇನ್ನು ಗ್ರಾಮದ ಮಧ್ಯಭಾಗದ ಬೀದಿಯಲ್ಲಿ ಮಹಿಳೆಯರೆಲ್ಲ ಕೂತು ಸೋಬಾನೆ ಗೀತೆ ಹಾಡಿ ಮದುವೆಯಲ್ಲಿ ಭಾಗಿಯಾಗಿದ್ದು, ಚಿಕ್ಕ ಬಾಲಕರು ವರ-ವಧುವಿನಂತೆ ಕಂಗೊಳಿಸಿದ್ದಾರೆ.
ಮಳೆ ಬಾರದಂತಹ ಸಂದರ್ಭದಲ್ಲಿ ಈ ರೀತಿ ಮಕ್ಕಳಿಗೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಅಲ್ಲಿಯ ಜನರಲ್ಲಿ ಇದೆ.
- Advertisement -