Tuesday, July 21, 2026
spot_imgspot_img
spot_imgspot_img

‘ನಾನೂ ಒಬ್ಬ ಅಣ್ಣ/ತಂದೆ – ನಿಮ್ಮ ಸುರಕ್ಷತೆಯೇ ನನಗೆ ಮುಖ್ಯ ,ಆರಾಮವಾಗಿ ಕುಳಿತುಕೊಳ್ಳಿ’ ಎಂಬ ಬರಹವನ್ನು ಬರೆದು ವೈರಲ್‌ ಆದ ಆಟೋ ಚಾಲಕ- ಯುವತಿಯ ಪೋಸ್ಟ್ ವೈರಲ್

- Advertisement -
- Advertisement -

ಬೆಂಗಳೂರು: ಇತ್ತೀಚೆಗೆ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಹೆಚ್ಚುತ್ತಿದೆ. ವಿಶೇಷವಾಗಿ ರಾತ್ರಿ ವೇಳೆ ಕೆಲಸ ಮುಗಿಸಿ ಮನೆಗೆ ಮರಳುವ ಮಹಿಳೆಯರಲ್ಲಿ ಅಸುರಕ್ಷತೆಯ ಭಾವನೆ ಹೆಚ್ಚಾಗಿದೆ. ನಡೆದುಕೊಂಡು ಹೋಗುವಾಗ ಹಾಗೂ ವಿವಿಧ ವಾಹನಗಳಲ್ಲಿ ಪ್ರಯಾಣಿಸುವ ಸಂದರ್ಭಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದಿರುವ ಹಲವು ಉದಾಹರಣೆಗಳು ಕಂಡುಬರುತ್ತಿವೆ.

ಇಂತಹ ಆತಂಕದ ನಡುವೆ ಬೆಂಗಳೂರಿನ ಒರ್ವ ಆಟೋ ಚಾಲಕನ ನಡೆ ಎಲ್ಲರ ಗಮನ ಸೆಳೆದಿದೆ. ಚಾಲಕನ ಸೀಟಿನ ಹಿಂದಿನ ಭಾಗದಲ್ಲಿ ‘ನಾನೂ ಒಬ್ಬ ಅಣ್ಣ/ತಂದೆ. ನಿಮ್ಮ ಸುರಕ್ಷತೆಯೇ ನನಗೆ ಮುಖ್ಯ ಆರಾಮವಾಗಿ ಕುಳಿತುಕೊಳ್ಳಿ’ ಎಂಬ ಬರಹವನ್ನು ಬರೆದು ಆಟೋ ಚಾಲಕರೊಬ್ಬರು ಪ್ರಯಾಣಿಕರಿಗೆ ಧೈರ್ಯ ತುಂಬಿದ್ದಾರೆ.

ಈ ಬರಹವನ್ನು ಗಮನಿಸಿದ ಯುವತಿಯೊಬ್ಬರು ತಮ್ಮ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ‘ರಾತ್ರಿ 12 ಗಂಟೆಗೆ ರಾಪಿಡೊ ಆಟೊದಲ್ಲಿ ಪ್ರಯಾಣಿಸುತ್ತಿದ್ದೆ. ಆಟೋದಲ್ಲಿ ಕುಳಿತ ತಕ್ಷಣ ಈ ಬರಹ ಓದಿದೆ. ಆಗ ನನಗೆ ನಿಜವಾಗಿಯೂ ಸುರಕ್ಷಿತ ಭಾವನೆ ಮೂಡಿತು’ ಎಂದು ಅವರು ಬರೆದುಕೊಂಡಿದ್ದಾರೆ. ಆದರೆ, ಆ ಆಟೋ ಚಾಲಕನ ಹೆಸರು ಅಥವಾ ವಿವರಗಳನ್ನು ಅವರು ಹಂಚಿಕೊಂಡಿಲ್ಲ.

ಆಟೋ ಚಾಲಕನ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

- Advertisement -

Related news

error: Content is protected !!