Friday, March 29, 2024
spot_imgspot_img
spot_imgspot_img

ಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ ಶಂಕು ಸ್ಥಾಪನೆ

- Advertisement -G L Acharya panikkar
- Advertisement -

ಮೈಸೂರು:  ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆನ್‍ಲೈನ್ ಮೂಲಕ ಚಾಲನೆ ನೀಡಿದ್ದಾರೆ.ಹಿರಿಯ ನಟಿ ಭಾರತಿ ಅವರು ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ.

ಮೈಸೂರು ತಾಲೂಕಿನ ಜಯಪುರ ಹೋಬಳಿಯ ಹಾಳಾಲು ಗ್ರಾಮದ 2 ಎಕರೆ ಪ್ರದೇಶದಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಮುಖ್ಯಮಂತ್ರಿ ಚಾಲನೆ ನೀಡಿದರು.ಈ ಮೂಲಕ ವಿಷ್ಣು ಸ್ಮಾರಕ ಅವರ ಹುಟ್ಟೂರಿನಲ್ಲಿಯೇ ಆಗಬೇಕೆಂದು ಆಗ್ರಹಿಸುತ್ತಲೇ ಬಂದಿದ್ದ ಭಾರತಿ ವಿಷ್ಣುವರ್ಧನ್ ಅವರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

ಇದೇ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ, ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಈಗಾಗಲೇ ತಡವಾಗಿದೆ. ಆದ್ದರಿಂದ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಡಾ.ವಿಷ್ಣುವರ್ಧನ್ ತವರು ಜಿಲ್ಲೆ ಮೈಸೂರಿನಲ್ಲಿ ಅವರ ಸ್ಮಾರಕ ನಿರ್ಮಾಣವಾಗುತ್ತಿರುವುದು ಅತ್ಯಂತ ಔಚಿತ್ಯಪೂರ್ಣವಾಗಿದೆ ಎಂದರು.

ಭಾರತಿ ವಿಷ್ಣುವರ್ಧನ್, ಅಳಿಯಾ ಅನಿರುದ್ದ್, ಪತ್ನಿ ಕೀರ್ತಿ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್ ಸೇರಿದಂತೆ ಅನೇಕ ಗಣ್ಯರು ವಿಷ್ಣು ಸ್ಮಾರಕ ಶಂಕುಸ್ಥಾಪನೆ ಕಾರ್ಯಕ್ರದ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.ಭಾರತಿ ವಿಷ್ಣುವರ್ಧನ್  ಕುಟುಂಬದ ಸತತ ಹೋರಾಟದ ಫಲವಾಗಿ ಕೊನೆಗೂ ‌11 ಕೋಟಿ ರೂ. ವೆಚ್ಚದಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಚಾಲನೆ ದೊರೆತಿದೆ.

- Advertisement -

Related news

error: Content is protected !!