Tuesday, July 28, 2026
spot_imgspot_img
spot_imgspot_img

ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳಕ್ಕೆ ನಟ ರಾಕಿಂಗ್ ಸ್ಟಾರ್ ಯಶ್ ಭೇಟಿ

- Advertisement -
- Advertisement -

ಸುಬ್ರಮಣ್ಯ: ಕೆಜಿಎಫ್-2 ರಿಲೀಸ್ ಗೆ ನಾಲ್ಕು ದಿನಗಳು ಬಾಕಿ ಇರುವಾಗ ನಟ ರಾಕಿಂಗ್ ಸ್ಟಾರ್ ಯಶ್ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ್ದಾರೆ. ಕೆ.ಜಿ.ಎಫ್ 2 ಸಿನಿಮಾ ಬಿಡುಗಡೆಗೂ ಮುನ್ನ ಕೆ.ಜಿ.ಎಫ್ ನಿರ್ಮಾಪಕ ವಿಜಯ್ ಕಿರಂಗದೂರು ಜೊತೆ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ ಯಶ್, ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದರು.

ನಂತರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು. ಬಳಿಕ ಅನ್ನ ಪ್ರಸಾದ ಸ್ವೀಕರಿಸಿ, ಉಜಿರೆಯ ಮಣ್ಣಿನ ಹರಕೆಯ ಪ್ರಸಿದ್ಧ ಕ್ಷೇತ್ರ ಸುರ್ಯ ಶ್ರೀ ಸದಾಶಿರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ಕ್ಷೇತ್ರದ ಆನುವಂಶೀಯ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ಸುರ್ಯಗುತ್ತು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ರಾಜಶೇಖರ ಅಜ್ರಿ, ಶತೀಶ್ಚಂದ್ರ ಸುರ್ಯಗುತ್ತು ಬರಮಾಡಿಕೊಂಡರು.

- Advertisement -

Related news

error: Content is protected !!