- Advertisement -
- Advertisement -
ವಿಟ್ಲ: ಕೊರೊನಾ ಸೋಂಕಿಗೆ ವಿಟ್ಲ ಸಮೀಪದ ವೃದ್ಧರೊಬ್ಬರು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ವಿಟ್ಲ ಕಸಬಾ ಗ್ರಾಮದ ನಿವಾಸಿ 73 ವರ್ಷದ ವೃದ್ಧ ಮೃತಪಟ್ಟವರು. ಇವರು ಕೆಲವು ಖಾಯಿಲೆಗಳಿಂದ ಬಳಲುತ್ತಿದ್ದರು. ಕೆಲವು ದಿನಗಳ ಹಿಂದೆ ಇವರ ಪುತ್ರನಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಬಳಿಕ ಕುಟುಂಬದ ಒಟ್ಟು ಏಳು ಮಂದಿ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ವೃದ್ಧರಲ್ಲಿಯೂ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿತ್ತು.
ಇದೀಗ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಇದು ವಿಟ್ಲದಲ್ಲಿ ಕೊರೊನಾಕ್ಕೆ ಮೊದಲ ಬಲಿಯಾಗಿದೆ. ತರಬೇತಿ ಪಡೆದ ಪಿ ಎಫ್ ಐ ಕಾರ್ಯಕರ್ತರು ಮಸೀದಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದರು.
ವಿಟ್ಲ ಕಂದಾಯ ಅಧಿಕಾರಿಗಳು,ವಿಟ್ಲ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡರು.
- Advertisement -