Saturday, September 5, 2026
spot_imgspot_img
spot_imgspot_img

ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಅಧ್ಯಕ್ಷೆ ನಫೀಸಾ ಪೆರುವಾಯಿ ಗ್ರಾಮ ಪಂಚಾಯತಿಗೆ ಲೋಕಾಯುಕ್ತ ದಾಳಿ…

- Advertisement -
- Advertisement -

ದೆಹಲಿಯಲ್ಲಿ ಗುರುತಿಸಿಕೊಂಡ ಅಧ್ಯಕ್ಷರು ಪೊಲೀಸ್‌ ಕಸ್ಟಡಿಯಲ್ಲಿ….

ಪೆರುವಾಯಿ ಗ್ರಾಮ ಪಂಚಾಯತ್‌ನ 2024/25 ನೇ ಸಾಲಿನ ಎರಡನೇ ಸುತ್ತಿನ ಗ್ರಾಮಸಭೆಯಲ್ಲಿ  ಗ್ರಾಮ ಪಂಚಾಯತ್ ಅಧ್ಯಕ್ಷೆ ನೆಫೀಸಾ ಪೆರುವಾಯಿಯವರ ಮೇಲೆ ಗ್ರಾಮಸ್ಥರು ಅವ್ಯವಹಾರ ನೇರ ಆರೋಪ ಮಾಡಿದ್ದರು. ಈ ವೇಳೆ ಉತ್ತರ ಕೊಡಲು ಹಿಂದೇಟು ಹಾಕಿದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಪಿಡಿಓ ಹಾಗೂ ಅಧಿಕಾರಿಗಳು ಸಭೆಯನ್ನು ಅರ್ಧದಲ್ಲೇ ಬಿಟ್ಟು ಎದ್ದು ಹೋಗಿರುವ ಬಗ್ಗೆ ವರದಿಯಾಗಿತ್ತು. ಯಾವುದೇ ಸ್ಪಷ್ಟನೆಯನ್ನು ನೀಡದ ಅಧ್ಯಕ್ಷರ ವಿರುದ್ಧ ಗ್ರಾಮಸ್ಥ ಯತೀಶ್ ಪೆರುವಾಯಿಯವರು ಲೋಕಾಯುಕ್ತರಿಗೆ ಸೂಕ್ತ ತನಿಖೆ ನಡಸುವಂತೆ ದೂರು ನೀಡಿದ್ದರು.  ಈ ಬಗ್ಗೆ ನೆಫೀಸಾ ಪೆರುವಾಯಿಯವರು ನಾನು ಹೆಣ್ಣು ಎಂದು ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿದ್ದಾರೆ. ನನ್ನಿಂದ ಒಂದು ರೂಪಾಯಿ ಅವ್ಯವಹಾರ ನಡೆದಿದ್ದರೂ, ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಆವಾಝ್‌ ಹಾಕಿದ್ದರು. ಅಲ್ಲದೆ ಈ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳಿಗೂ ಬೆದರಿಕೆಯೊಡ್ಡಿ ತನ್ನ ದರ್ಪ ತೋರಿದ್ದರು.

ಘಟನೆಯ ವಿವರ-

ಪೆರುವಾಯಿ ಗ್ರಾಮದ ಡೂರುದಾರರ ಮಾವನಿಗೆ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದಲ್ಲಿ 1 ಎಕ್ರೆ ಕೃಷಿ ಜಮೀನು ಇದ್ದು, ನೀರಿನ ವ್ಯವಸ್ಥೆ ಇಲ್ಲದೇ ಇರುವುದರಿಂದ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮ ಪಂಚಾಯತ್‌ಗೆ ಸರ್ಕಾರದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ತಮ್ಮ ಜಾಗಕ್ಕೂ ಒಂದು ಕೊಳವೆ ಬಾವಿಯನ್ನು ಮಾಡಿಕೊಡಲು 2024 ರಲ್ಲಿ ಪಿಡಿಒ, ಗ್ರಾಮ ಪಂಚಾಯತ್, ಪೆರುವಾಯಿ ಗ್ರಾಮ ಪಂಚಾಯತ್‌ರವರಿಗೆ ಅರ್ಜಿ ಸಲ್ಲಿಸಿರುತ್ತಾರೆ. 2024 ನೇ ಸಾಲಿನಲ್ಲಿ ಪೆರುವಾಯಿ ಗ್ರಾಮ ಪಂಚಾಯತ್ ರವರು ಸತಾಯಿಸಿ ಕೊನೆಯಲ್ಲಿ ಡೂರುದಾರರ ಮಾವನವರ ಹೆಸರನ್ನು ಕೊಳವೆ ಬಾವಿ ಲಿಸ್ಟ್‌ನಲ್ಲಿ ಸೇರಿಸಿರುವುದಿಲ್ಲ.ನಂತರ 2025 ನೇ ಇಸವಿಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಸರ್ಕಾರವು ಕೃಷಿಕರಿಗೆ ಕೊಳವೆ ಬಾವಿ ಮಾಡಿಕೊಡುತ್ತಿರುವ ಕುರಿತು ತಿಳಿದು ಬಂದಾಗ, ಡೂರುದಾರರ ಮಾವನವರು ಪುನಃ ಮೇ 2025 ರಲ್ಲಿ ಕೊಳವೆ ಬಾವಿಗೆ ಅರ್ಜಿಯನ್ನು ಸಲ್ಲಿಸಿರುತ್ತಾರೆ. ನಂತರ ಡೂರುದಾರರ ಪತ್ನಿ ಪೆರುವಾಯಿ ಗ್ರಾಮ ಪಂಚಾಯತ್ ಕಛೇರಿಗೆ ಎರಡು ಮೂರು ಬಾರಿ ಹೋಗಿ ವಿಚಾರಿಸಿದರು ಕೂಡ ಸರಿಯಾಗಿ ಪ್ರತಿಕ್ರಿಯೆ ನೀಡಿರುವುದಿಲ್ಲ. ಫಿರ್ಯಾದಿದಾರರ ಮಾವನಿಗೆ ಸುಮಾರು 75 ವರ್ಷ ವಯಸ್ಸಾಗಿದ್ದು, ಅವರಿಗೆ ಅಸೌಖ್ಯ ಇದ್ದುದರಿಂದ ಫಿರ್ಯಾದಿದಾರರನ್ನು ಕರೆದು ಕೊಳವೆ ಬಾವಿ ಬಗ್ಗೆ ಪಂಚಾಯತ್‌ಗೆ ಹೋಗಿ ವಿಚಾರಿಸಿಕೊಂಡು ಬರುವಂತೆ  ಡೂರುದಾರರ ತಿಳಿಸಿದ್ದು, ದಿನಾಂಕ 02.09.2025 ರಂದು ಪೆರುವಾಯಿ ಗ್ರಾಮ ಪಂಚಾಯತ್‌ಗೆ ಹೋಗಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ನೆಫಿಸ್ಸಾ ರವರಲ್ಲಿ ತನ್ನ ಮಾವನವರ ಹೆಸರಿಗೆ ಕೊಳವೆ ಬಾವಿ ಮಂಜೂರು ಆಗಿದೆಯೇ ಎಂಬ ಬಗ್ಗೆ ವಿಚಾರಿಸಿದಾಗ *’ನಿಮಗೆ ಬೋರ್‌ವೆಲ್ ಫ್ರೀ ಆಗುತ್ತದೆ, ಬೆಂಗಳೂರು ಆಫೀಸ್‌ಗೆ ಹತ್ತು ಸಾವಿರ ಕೊಡ್ಲಿಕ್ಕೆ ಇದೆ, ಹಣ ಕೊಟ್ಟರೆ ಅವರು ಪಾಸ್ ಮಾಡುತ್ತಾರೆ, ತಾನು ಬೆಂಗಳೂರಿಗೆ ಹೋಗಿ ನಿಮ್ಮ ಕೆಲಸ ಮಾಡಿಸುತ್ತೇನೆ, ಹಣ ತಗೊಂಡು ಬನ್ನಿ, ನೀವು ಹಣ ಕೊಟ್ಟರೆ ಮಾತ್ರ ನಿಮಗೆ ಬೋರ್‌ವೆಲ್ ಪಾಸ್ ಮಾಡಿಸಿ ಕೊಡುತ್ತೇನೆ’ ಎಂದು ಹೇಳಿರುತ್ತಾರೆ.* ಫಿರ್ಯಾದಿದಾರರು ತನ್ನಲ್ಲಿ ಅಷ್ಟು ಹಣ ಇಲ್ಲ ಎಂದು ಹೇಳಿ ವಾಪಾಸು ಬಂದಿರುತ್ತಾರೆ.

ನಂತರ ಡೂರುದಾರರ ದಿನಾಂಕ 04.09.2025 ರಂದು ವಾಪಾಸ್ಸು ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ನೆಫಿಸಾ ರವರಲ್ಲಿ ಬೋರ್‌ವೆಲ್ ಹಾಕಿಸಿ ಕೊಡಲು ಕೇಳಿಕೊಂಡಾಗ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ನೆಫಿಸಾರವರು ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಬೋರ್‌ವೆಲ್ ಹಾಕಿಸಿ ಕೊಡಲು ರೂ 10,000/- (ಹತ್ತು ಸಾವಿರ) ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣಿಯಲ್ಲಿ ಶ್ರೀಮತಿ ನಫಿಸ್ಸಾ ಅಧ್ಯಕ್ಷರು ಪೆರುವಾಯಿ ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕು ರವರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.

**ಈ ದಿನ ದಿನಾಂಕ 06.09.2025 ರಂದು ಶ್ರೀಮತಿ  ನಫೀಸಾ, ಅಧ್ಯಕ್ಷರು, ಪೆರುವಾಯಿ ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕು ರವರು ಬಿಲ್ ಕಲೆಕ್ಟರ್ ಶ್ರೀ ವಿಲಿಯಂ ರವರಿಗೆ ಪಿರ್ಯಾದುದಾರರಿಂದ ರೂ. 10,000/- (ಹತ್ತು ಸಾವಿರ) ಲಂಚದ ಹಣವನ್ನು ಪಡೆದುಕೊಳ್ಳಲು ಸೂಚಿಸಿದಂತೆ ರೂ. 10,000/- (ಹತ್ತು ಸಾವಿರ) ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಶ್ರೀಮತಿ ನಫಿಸ್ಸಾ, ಅಧ್ಯಕ್ಷರು, ಪೆರುವಾಯಿ ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕು ರವರನ್ನು ಮತ್ತು ಬಿಲ್ ಕಲೆಕ್ಟರ್ ವಿಲಿಯಂ ರವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ತನಿಖೆ ಮುಂದುವರಿದಿದೆ.*

ಈ ಕಾರ್ಯಾಚರಣೆಯಲ್ಲಿ ಶ್ರೀ ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್. ರವಿ ಪವಾರ್ ರವರು ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿರುತ್ತಾರೆ.

- Advertisement -

Related news

error: Content is protected !!