Wednesday, July 22, 2026
spot_imgspot_img
spot_imgspot_img

ವಿಟ್ಲ: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ದಮಯಂತಿ ಹಾಗೂ ಅಶೋಕ್ ಕುಮಾರ್ ಶೆಟ್ಟಿ

- Advertisement -
- Advertisement -

ವಿಟ್ಲ: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ವಿಟ್ಲ ಪಟ್ಟಣ ಪಂಚಾಯತ್ ಹಿರಿಯ ಸದಸ್ಯ ಅಶೋಕ್ ಕುಮಾರ್ ಶೆಟ್ಟಿ ಮತ್ತು ಮಾಜಿ ಅಧ್ಯಕ್ಷೆ ದಮಯಂತಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ದ.ಕ.ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದ ಅಶೋಕ್ ಕುಮಾರ್ ಶೆಟ್ಟಿ ಅವರು, ಈ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಇವರು ಜಿಲ್ಲಾ ಯೋಜನಾ ಸಮಿತಿ ಸದಸ್ಯರಾಗಿ, ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದರು. ಸತತ ನಾಲ್ಕು ಬಾರಿ ಚುನಾವಣೆಯಲ್ಲಿ ಜಯಗಳಿಸಿದ ಇವರು, ಮೂರು ಬಾರಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಹಾಗೂ ಒಂದು ಬಾರಿ ಪಟ್ಟಣ ಪಂಚಾಯತ್ ಸದಸ್ಯರಾಗಿ ಆಯ್ಕೆಗೊಂಡಿದ್ದರು. ಕೇವಲ ರಾಜಕೀಯ ಕ್ಷೇತ್ರವಲ್ಲದೇ ಇವರು ಉತ್ತಮ ಕ್ರೀಡಾಪಟುವಾಗಿದ್ದು, ದೇಹದಾರ್ಢ್ಯ ಸ್ಫರ್ಧೆಯಲ್ಲಿ ಪದಕ ಪಡೆದಿದ್ದರು. ದಮಯಂತಿ ಅವರು ವಿಟ್ಲ ಪಟ್ಟಣ ಪಂಚಾಯತ್ ಎರಡನೇ ಅವಧಿಯಲ್ಲಿ ಅಧ್ಯಕ್ಷರಾಗಿದ್ದರು.

- Advertisement -

Related news

error: Content is protected !!