Wednesday, September 9, 2026
spot_imgspot_img
spot_imgspot_img

*ವಿಟ್ಲ ಪರಿಸರದಲ್ಲಿ ಅಕ್ರಮ ಮರ ಸಾಗಾಟದ ಬಗ್ಗೆ ವಿಟಿವಿ ವರದಿ ಬೆನ್ನಲ್ಲೇ ಎಚ್ಚತ್ತ ಅರಣ್ಯಾಧಿಕಾರಿಗಳು* *ಅಕ್ರಮ ಮರ ಸಾಗಾಟದ ವಾಹನ ವಶಕ್ಕೆ ಪಡದ ಅರಣ್ಯಾಧಿಕಾರಿಗಳು*

- Advertisement -
- Advertisement -

ವಿಟ್ಲ: ಪರವಾನಿಗೆ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಪಿಕ್ ಅಪ್ ವಾಹನವನ್ನು ಅರಣ್ಯಧಿಕಾರಿಗಳು ವಶಕ್ಕೆ ಪಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕಡಂಬುವಿನಲ್ಲಿ ನಡೆದಿದೆ.

ಬಂಟ್ವಾಳ ತಾಲೂಕು ವಿಟ್ಲಪಡೂರು ಗ್ರಾಮದ ಕಡಂಬು ಎಂಬಲ್ಲಿ ಪುತ್ತೂರು ಕಡೆಯಿಂದ ಮರದ ದಿಮ್ಮಿಗಳನ್ನು ತುಂಬಿಸಿಕೊಂಡು ಕೇರಳಕ್ಕೆ ಸಾಗಾಟ ಮಾಡುವ ವೇಳೆ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆ ಹಚ್ಚಿ ಕೇಸು ದಾಖಲಿಸಿಕೊಂಡಿದ್ದಾರೆ. ಆರೋಪಿ ವಾಹನ ಚಾಲಕ ಅನ್ವರ್ ಸಾದತ್ ಅದ್ದೂರು ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಹಾಜರಾಗಲು ನೋಟಿಸ್‌ ನೀಡಲಾಗಿದೆ.ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಮೌಲ್ಯ 3.50 ಲಕ್ಷ ಎಂದು ಅಂದಾಜಿಸಲಾಗಿದೆ.

ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಕಾಂತ್ ಖಣದಾಳೆ ನೇತೃತ್ವದಲ್ಲಿ ಪ್ರಭಾರ ವಲಯ ಅರಣ್ಯಾಧಿಕಾರಿ ಪ್ರಶಾಂತ ಪೂಜಾರಿ, ಉಪ ವಲಯ ಅರಣ್ಯಾಧಿಕಾರಿ ವಿನಯ ಕುಮಾರ್, ಶಿವಾನಂದ ಮಾಧರ, ವಾಹನ ಚಾಲಕ ಜಯಪ್ರಕಾಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

- Advertisement -

Related news

error: Content is protected !!