- Advertisement -
- Advertisement -




ವಿಟ್ಲ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ ದಿನಾಂಕ : 14-08-2024ನೇ ಗುರುವಾರ ಸಂಜೆ 7:00 ಗಂಟೆಗೆ ಪಂಚಲಿಂಗೇಶ್ವರ ದೇವಸ್ಥಾನದಿಂದ ಹೊರಟು ವಿಟ್ಲ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಿಟ್ಲ ಖಾಸಗಿ ಬಸ್ ನಿಲ್ದಾಣದವರೆಗೆ ನಡೆಯಲಿದೆ.
ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಮಂಗಳೂರು ವಿಭಾಗ ಸಾಮರಸ್ಯ ವೇದಿಕೆಯ ಸಹ ಸಂಯೋಜಕ ಶಿವಪ್ರಸಾದ್ ಮಲೆಬೆಟ್ಟು ದಿಕ್ಕೂಚಿ ಭಾಷಣದೊಂದಿಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಹಿಂದೂ ಬಾಂಧವರು ಹೆಚ್ಚಿನ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -








