Saturday, April 20, 2024
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ಆದೇಶದಂತೆ ನಾಲ್ಕು ಕಡೆಗಳಲ್ಲಿ ಚೆಕ್ ಪೋಸ್ಟ್; 80 ಜನರ ಸ್ವ್ಯಾಬ್ ಟೆಸ್ಟ್!!

- Advertisement -G L Acharya panikkar
- Advertisement -

ವಿಟ್ಲ: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಪಟ್ಟಣ ಪಂಚಾಯತ್ ಕೊರೊನಾ ಟಾಸ್ಕ್ ಪೋರ್ಸ್ ಸಭೆಯ ಆದೇಶದಂತೆ ಇಂದು ವಿಟ್ಲದ ನಾಲ್ಕು ರಸ್ತೆಗಳಲ್ಲಿ ಚೆಕ್ ಪೋಸ್ಟಗಳನ್ನು ತೆರೆಯಲಾಗಿದೆ.

ವಿಟ್ಲ ಪಟ್ಟಣ ಪಂಚಾಯತ್ ಕೊರೊನಾ ಟಾಸ್ಕ್ ಪೋರ್ಸ್ ಸಭೆಯಲ್ಲಿ ಕೊರೊನಾ ನಿಯಂತ್ರಿಸಲು ವಾರಾಂತ್ಯ ಕರ್ಫ್ಯೂ ವಿಧಿಸಲಾಗಿದ್ದು, ಪಟ್ಟಣ ಪಂಚಾಯತ್ ನ ಹೊಸ ನಿಯಮ ನಿರೀಕ್ಷೆಯಷ್ಟು ಫಲಪ್ರದವಾಗಿಲ್ಲ ಪೇಟೆಗೆ ಬಂದವರಲ್ಲಿ ಒಟ್ಟು 80 ಮಂದಿಯನ್ನು ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಯಿತು.

ಪ್ರತಿದಿನ ಪೇಟೆಗೆ ಬರುವ ಜನರನ್ನು ವಿಟ್ಲ ಪೇಟೆಯ ಪ್ರವೇಶ ಸ್ಥಳವಾದ ನಾಡಕಚೇರಿ, ಮೇಗಿನಪೇಟೆ, ಬೊಬ್ಬೆಕೇರಿ, ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಗಳು, ಪಟ್ಟಣ ಪಂಚಾಯತ್ ಸಿಬ್ಬಂದಿಗಳು, ವಿಟ್ಲ ಪೊಲೀಸರು ಜಂಟಿಯಾಗಿ ಚೆಕ್ ಪೋಸ್ಟನಲ್ಲಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ವಿಟ್ಲ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ 80 ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ.

ನಾಡಕಚೇರಿ, ಮೇಗಿನಪೇಟೆ, ಬೊಬ್ಬೆಕೇರಿ ಗಳಲ್ಲಿ ದೇಹದ ಟೆಂಪ್ರೇಚರ್ ಪರೀಕ್ಷಿಸಿ ಜನರಲ್ಲಿ ಕೊರೊನಾ ಜಾಗೃತಿ ಮೂಡಿಸಲಾಗಿದೆ. ನಾಳೆಯಿಂದ ಎಲ್ಲಾ ಭಾಗದಲ್ಲಿಯೂ ಗಂಟಲು ದ್ರವ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದು, ಪಟ್ಟಣ ಪಂಚಾಯತ್ ಕೊರೊನಾ ಟಾಸ್ಕ್ ಪೋರ್ಸ್ ಸಭೆಯ ಈ ಹೊಸ ನಿಯಮ ಸಾರ್ವಜನಿಕರಲ್ಲಿ ಆಕ್ರೋಶವನ್ನುಂಟು ಮಾಡಿದೆ.

- Advertisement -

Related news

error: Content is protected !!