Saturday, August 15, 2026
spot_imgspot_img
spot_imgspot_img

ವಿಟ್ಲ:ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

- Advertisement -
- Advertisement -

ವಿಟ್ಲ ಗ್ರಾಮೀಣ ಸಹಕಾರಿ ಸಂಘ (ನಿ.) ವತಿಯಿಂದ ಜೇಸಿ ಪೆವಿಲಿಯನ್‌ಗೆ HVLS ಫ್ಯಾನ್ ಕೊಡುಗೆ

“ವಿದ್ಯಾರ್ಥಿಗಳು ರಾಷ್ಟ್ರದ ಭವಿಷ್ಯವನ್ನು ರೂಪಿಸುವ ಶ್ರೇಷ್ಠ ನಾಯಕರಾಗಿ ಹೊರಹೊಮ್ಮಬೇಕು: ನಿವೃತ್ತ ಸೇನಾಧಿಕಾರಿ ಮಾಧವ ಬಿ.ಕೆ.

ವಿಟ್ಲ: ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಧರ್ ಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ಸೇನಾಧಿಕಾರಿ ಶ್ರೀ ಮಾಧವ ಬಿ.ಕೆ. ಅವರು ಭಾಗವಹಿಸಿದ್ದರು.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಶಾಲಾ ಸಹಾಯಕಿಯರಿಗೆ ವಿಶೇಷ ಗೌರವ ಸಲ್ಲಿಸಲಾಯಿತು.

ಮುಖ್ಯ ಅತಿಥಿ ಮಾಧವ ಬಿ.ಕೆ. ಮಾತನಾಡಿ, “ವಿದ್ಯಾರ್ಥಿಗಳು ರಾಷ್ಟ್ರದ ಭವಿಷ್ಯವನ್ನು ರೂಪಿಸುವ ಶ್ರೇಷ್ಠ ನಾಯಕರಾಗಿ ಹೊರಹೊಮ್ಮಬೇಕು. ಜೀವನದಲ್ಲಿ ಶಿಸ್ತು, ದೇಶಪ್ರೇಮ ಮತ್ತು ಪ್ರಾಮಾಣಿಕತೆಯನ್ನು ಅಳವಡಿಸಿಕೊಳ್ಳಬೇಕು. ದೇಶಸೇವೆಯಲ್ಲಿ ಪ್ರತಿಯೊಬ್ಬ ನಾಗರಿಕನ ಕೊಡುಗೆಯೂ ಅಮೂಲ್ಯವಾದದ್ದು,” ಎಂದು ಹೇಳಿದರು.

ಶಾಲಾ ಅಧ್ಯಕ್ಷರಾದ ಶ್ರೀಧರ್ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ವಿವರಿಸಿದರು.

ಬಳಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಇದರ ಜೊತೆಗೆ ವಿಟ್ಲ ಗ್ರಾಮೀಣ ಸಹಕಾರಿ ಸಂಘದ ವತಿಯಿಂದ ಶಾಲೆಯ ಜೇಸಿ ಪೆವಿಲಿಯನ್‌ಗೆ HVLS ಫ್ಯಾನ್ ನೀಡಲಾಯಿತು. ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ಜಗನ್ನಾಥ ಸಾಲಿಯಾನ್ ಅವರು ಫ್ಯಾನ್ ಗೆ ಚಾಲನೆ ನೀಡಿದರು ಹಾಗೂ ಬ್ಯಾಂಕಿನ ಇತರ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ರಾಧಾಕೃಷ್ಣ ಪೈ, ಕಾರ್ಯದರ್ಶಿ ರಾಘವೇಂದ್ರ ಪೈ, ಉಪಾಧ್ಯಕ್ಷರಾದ ಹಸನ್ ವಿಟ್ಲ, ಪ್ರಾಂಶುಪಾಲ ಜಯರಾಮ ರೈ, ಉಪಪ್ರಾಂಶುಪಾಲೆಯರಾದ ಕವಿತಾ ಮತ್ತು ಹೇಮಲತಾ, ಶಾಲಾ ನಾಯಕಿ ರಾಶಿ ಜಿ.ಆರ್. ಹಾಗೂ ಉಪನಾಯಕ ಅರ್ಪಿತ್ ಶೆಟ್ಟಿ ಸೇರಿದಂತೆ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. ಪ್ರೌಢಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆ ಸಲ್ಲಿಸಿದರು. ಸಹಶಿಕ್ಷಕಿಯರಾದ ನಯನ, ಭವ್ಯ, ಹೇಮಲತಾ ಹಾಗೂ ದೈಹಿಕ ಶಿಕ್ಷಕರಾದ ಬಾನು ಪ್ರಕಾಶ್ ಮತ್ತು ಶಶಿಕಲಾ ಕೆ ಸಂಯೋಜಿಸಿದರು.

- Advertisement -

Related news

error: Content is protected !!