


ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ ವಿಟ್ಲ ವಲಯದ ವಿಟ್ಲ ಮುಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟದ 20 ನೇ ವಾರ್ಷಿಕೋತ್ಸವ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷ ಪುನೀತ್ ಮಾಡುತ್ತಾರು, ರವರು ಮಾಡಿ ಯೋಜನೆಯ ಕಾರ್ಯಕ್ರಮಗಳ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯೋಜನಾಧಿಕಾರಿ ಸುರೇಶ್ ಗೌಡ ಮಾತಾಡಿ ಯೋಜನೆಯ ನಡೆದು ಬಂದ ದಾರಿ, ಯೋಜನೆ ಹಿನ್ನಲೆ, ಒಕ್ಕೂಟದ ಜವಾಬ್ದಾರಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ಕೇಂದ್ರ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ಮಾತನಾಡಿ ಯೋಜನೆಯ ಸೌಲಭ್ಯಗಳ ಮಾಹಿತಿ ನೀಡಿದರು. ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವೇಣುಗೋಪಾಲ್ ಸರ್ ಶುಭ ಹಾರೈಸಿದರು.
ವೇದಿಕೆಯಲ್ಲಿ ವಿಟ್ಲ ವಲಯದ ಅಧ್ಯಕ್ಷ ಪ್ರಮೀಳಾ, ವಿಪತ್ತು ಘಟಕದ ಅಧ್ಯಕ್ಷ ಚಂದ್ರಹಾಸ, ಸಭಭವನದ ಸದಸ್ಯ ಸಂಜೀವ ಪೂಜಾರಿ, ವಲಯದ ಮೇಲ್ವಿಚಾರಕ ಜಗದೀಶ್ ಪೂಜಾರಿ ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಬಾಲಕೃಷ್ಣ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದ ಸ್ವಾಗತವನ್ನು ಸುಂದರ ಪೂಜಾರಿ ಕೆಡಿಗೆದಡಿ ಮಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಹರೀಶ್ ಪೂಜಾರಿ ನಡೆಸಿ, ಧನ್ಯವಾದವನ್ನು ಸೌಮ್ಯ ನಡೆಸಿದರು. ಸೇವಾಪ್ರತಿನಿಧಿ ಶ್ರೀಮತಿ ಯಶೋಧ ಮತ್ತು VLE ಶಿಲ್ಪಾ ಕಾರ್ಯಕ್ರಮಕ್ಕೆ ಸಹಕರಿಸಿದರು.








