Saturday, June 6, 2026
spot_imgspot_img
spot_imgspot_img

ವಿಟ್ಲ ಕಾಶಿಮಠ ಬೈಕ್ ಬೊಲೆರೊ ಡಿಕ್ಕಿ:ಬೈಕ್ ಸವಾರ ಮೃತ್ಯು!

- Advertisement -
- Advertisement -

ವಿಟ್ಲ: ವಿಟ್ಲ ಕಾಶಿಮಠ ಎಂಬಲ್ಲಿ ಬೈಕ್ ಮತ್ತು ಬೊಲೆರೊ ಡಿಕ್ಕಿಯಾಗಿ ಸವಾರ ಮೃತ ಪಟ್ಟ ಘಟನೆ ಇಂದು ನಡೆದಿದೆ.ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಬೈಕ್ ಸವಾರ ಮಾಣಿ ಬರಿಮಾರು ನಿವಾಸಿ ಬಾಲಕೃಷ್ಣ(55) ರವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್ ಹಾಗೂ ಬೊಲೆರೋ ವಾಹನ ವಿಟ್ಲ ಭಾಗದಿಂದ ಉಕ್ಕುಡ ಭಾಗಕ್ಕೆ ತೆರಳುತ್ತಿದ್ದಾಗ ಕಾಶಿಮಠ ಸಮೀಪ ಬೊಲೆರೋ ವಾಹನ‌ ಬೈಕ್ ನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಘಟನೆಯಿಂದಾಗಿ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಬಾಲಕೃಷ್ಣ ರವರು ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿ ರವರ ನೇತೃತ್ವದ ಪೊಲೀಸರ ತಂಡ ತೆರಳಿ ಮಾಹಿತಿ ಸಂಗ್ರಹಿಸಿದೆ. ಮೃತದೇಹವನ್ನು ವಿಟ್ಲ ಸರಕಾರ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು, ಬೊಲೆರೋ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!