Wednesday, July 29, 2026
spot_imgspot_img
spot_imgspot_img

ವಿಟ್ಲ: ಎಸ್ ಡಿ ಪಿ ಐ ಮುಖಂಡ ರಿಯಾಜ್ ಪರಂಗಿಪೇಟೆ ವಿರುದ್ದ ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

- Advertisement -
- Advertisement -

ವಿಟ್ಲ: ಎಸ್ ಡಿ ಪಿ ಐ ಮುಖಂಡ ರಿಯಾಜ್ ಪರಂಗಿಪೇಟೆ ವಿರುದ್ದ ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಎಸ್ ಡಿ ಪಿ ಐ ಮುಖಂಡ ರಿಯಾಜ್ ಪರಂಗಿಪೇಟೆ ಎಂಬಾತನು ಕೋಮು ಪ್ರಚೋದನಕಾರಿ ಭಾಷಣ ಮಾಡಿ ಹಿಂದೂ ಪರ ಸಂಘಟನೆಗಳನ್ನು ಅವಹೇಳನ ಮಾಡಿ ಬೆದರಿಕೆ ಹಾಕಿ ಸಮಾಜದಲ್ಲಿ ಕೋಮು ಗಲಭೆ ಸೃಷ್ಟಿಸುವ ಹುನ್ನಾರ ನಡೆಸಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ಕುರಿತಂತೆ ವಿಟ್ಲ ಪೊಲೀಸ್ ಠಾಣಾಧಿಕಾರಿಗಳಿಗೆ ದೂರು ನೀಡಲಾಗಿದೆ.

ಇಂತಹ ವ್ಯಕ್ತಿಗಳಿಂದಾಗಿ ಹಾಳುಗೆಡವುತ್ತಿರುವ ಸಮಾಜದಲ್ಲಿ ಶಾಂತಿ ನೆಲೆಯೂರಲು ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕ್ ಅಧ್ಯಕ್ಷರಾದ ಗಣೇಶ್ ಕೆದಿಲ , ಉಪಾಧ್ಯಕ್ಷರಾದ ರಾಜೇಶ್ ಕರೋಪಾಡಿ ಮತ್ತು ಸಂಘಟನೆಯ ಸದಸ್ಯರು ಪೊಲೀಸರಲ್ಲಿ ಮನವಿ ಮಾಡಿಕೊಂಡರು.

- Advertisement -

Related news

error: Content is protected !!