Thursday, September 24, 2026
spot_imgspot_img
spot_imgspot_img

ವಿಟ್ಲ: ಕಡಂಬು ಹಾಲು ಉತ್ಪಾದಕರ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ

- Advertisement -
- Advertisement -

ವಿಟ್ಲ: ಕಡಂಬು ಹಾಲು ಉತ್ಪಾದಕರ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಕಚೇರಿಯಲ್ಲಿ ನಡೆಯಿತು.

ಸಂಘದ ಉಪಾಧ್ಯಕ್ಷ ತಮ್ಮಯ್ಯ ಗೌಡ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರಿನ ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ವಿಸ್ತರಣಾಧಿಕಾರಿ ಜಗದೀಶ್ ಅವರು ಒಕ್ಕೂಟದಿಂದ ಸಂಘದ ಸದಸ್ಯರಿಗೆ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಸಂಘವು ಪ್ರಸಕ್ತ ವರ್ಷದಲ್ಲಿ ಒಟ್ಟು 3,39,40,256.26 ರೂ. ವ್ಯವಹಾರ ನಡೆಸಿ, 3,45,767.57 ರೂ. ಲಾಭ ಗಳಿಸಿದೆ. ಸಂಘದ ಸದಸ್ಯರಿಗೆ ಶೇಕಡಾ 25 ರಷ್ಟು ಡಿವಿಡೆಂಡ್ ನೀಡಲಾಗುವುದು ಎಂದರು. ವಿಟ್ಲದ ಪಶುವೈದ್ಯಾಧಿಕಾರಿ ಡಾ. ಅವಿನಾಶ್ ಅವರು ಹೈನುಗಾರಿಕೆ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಘಕ್ಕೆ ಅತಿ ಹೆಚ್ಚು ಹಾಲು ಪೂರೈಸಿದ ಸದಸ್ಯರನ್ನು ಸನ್ಮಾನಿಸಲಾಯಿತು. ತೇಜಾಶ್ರೀ ಪ್ರಥಮ, ಸಂಘದ ಅಧ್ಯಕ್ಷ ಪ್ರದೀಪ್ ಬನ ದ್ವಿತೀಯ ಹಾಗೂ ಉಮಾವತಿ ತೃತೀಯ ಬಹುಮಾನ ಪಡೆದರು. ಎಲ್ಲ ಸದಸ್ಯರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಸಂಘದ ಕಾರ್ಯದರ್ಶಿ ರಾಘವ ಗೌಡ ಬನ ಸ್ವಾಗತಿಸಿ, ವರದಿ ವಾಚಿಸಿ ಲೆಕ್ಕಪತ್ರ ಮಂಡಿಸಿದರು. ತಮ್ಮಯ್ಯ ಗೌಡ ಅವರು ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಹೂವಯ್ಯ ಶೆಟ್ಟಿಗಾರ್, ಫೆಲಿಕ್ಸ್, ರಮೇಶ್ ಗಡದಕೋಡಿ, ವಿನೋದ, ಪುಷ್ಪಾ ಬನ, ಧನಂಜಯ ದೇವರಮನೆ, ಪೂವಪ್ಪ ಗೌಡ ಕೂಡೂರು, ಲಕ್ಷ್ಮಣ ಹಾಗೂ ಸದಸ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!