


ವಿಟ್ಲ: ವಿಟ್ಲ ಸರ್ಕಾರಿ ಪ್ರೌಢಶಾಲೆ (ಆರ್.ಎಂ.ಎಸ್.ಎ) ವಿಟ್ಲ ಇದರ ವಾರ್ಷಿಕ ಕ್ರೀಡಾಕೂಟ 2026-27 ಇದರ ಉದ್ಘಾಟನಾ ಸಮಾರಂಭ ಇಂದು (ನ.24) ನಡೆಯಿತು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಮಾನಾಥ ವಿಟ್ಲ ಕ್ರೀಡಾಕೂಟವನ್ನು ಉದ್ಘಾಟಿಸಿದರು. ನಿವೃತ್ತ ಪಿ.ಡಿ. ಶೇಸಪ್ಪ ಗೌಡ ಗೌರವ ವಂದನೆ ಸ್ವೀಕರಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರವಿಶಂಕರ್ ಶಾಸ್ತ್ರಿ ಧ್ವಜಾರೋಹಣ ನೆರವೇರಿಸಿದರು.
ಹೈಸ್ಕೂಲ್ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನವೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ತುಳಸಿದಾಸ್ ಶೆಟ್ಟಿ, ಪ್ರಾಥಮಿಕ ವಿಭಾಗದ ಉಪಾಧ್ಯಕ್ಷೆ ವಿಶಾಲಾಕ್ಷಿ, ಹೈಸ್ಕೂಲ್ ಮುಖ್ಯ ಶಿಕ್ಷಕಿ ಫೆಲ್ಸಿಟಾ ಇವಾ ಗಲಬಾವೊ, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ವಾರಿಜ, ದೈಹಿಕ ಶಿಕ್ಷಕ ವಿದ್ಯಾಶಂಕರ್, ರವಿವರ್ಮ, ರಾಜೇಶ್, ಇತರ ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ಮಿನಿ ಒಲಿಂಪಿಕ್ಸ್‌ನಲ್ಲಿ ಪದಕ ಪಡೆದ ವಿದ್ಯಾರ್ಥಿಗಳಾದ ಧನ್ವಿ ಮತ್ತು ವರ್ಷಾ ಅವರನ್ನು ಗೌರವಿಸಲಾಯಿತು.

ಸೀಮಾ ಸ್ವಾಗತಿಸಿದರು. ದೈಹಿಕ ಶಿಕ್ಷಕ ರಾಜೇಶ್ ಪ್ರಸ್ತಾವನೆ ಮಾಡಿದರು. ಚಿಂತನ್ ಪ್ರತಿಜ್ಞಾ ವಿಧಿ ಬೋಧಿಸಿ, ಧನ್ವಿ ಕೆ ವಂದಿಸಿದರು. ಶಿಕ್ಷಕ ಜಗದೀಶ್ ನಿರೂಪಿಸಿದರು. ದೈಹಿಕ ಶಿಕ್ಷಕಿ ಶ್ವೇತಾ ಸಹಕರಿಸಿದರು.








