Thursday, August 13, 2026
spot_imgspot_img
spot_imgspot_img

ವಿಟ್ಲ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ರಸ್ತೆ ಸುರಕ್ಷತೆ, ಮಾದಕ ವಸ್ತು ಹಾಗೂ ಪೋಕ್ಸೋ ಕಾನೂನು ಕುರಿತು ಜಾಗೃತಿ ಕಾರ್ಯಾಗಾರ

- Advertisement -
- Advertisement -

ವಿಟ್ಲ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ವಿಟ್ಲದಲ್ಲಿ ವಿದ್ಯಾರ್ಥಿಗಳಿಗಾಗಿ ರಸ್ತೆ ಸುರಕ್ಷತಾ ಕ್ರಮಗಳು, ಮಾದಕ ವಸ್ತುಗಳ ದುಷ್ಪರಿಣಾಮ ಹಾಗೂ ಪೋಕ್ಸೋ (POCSO) ಕಾನೂನು ಕುರಿತು ಜಾಗೃತಿ ಮೂಡಿಸುವ ಮಾಹಿತಿ ಕಾರ್ಯಾಗಾರವನ್ನು ಆ. 11ರಂದು ಆಯೋಜಿಸಲಾಯಿತು.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಹರೀಶ್ ಹೆಡ್ ಕಾನ್ಸ್ಟೇಬಲ್ ವಿಟ್ಲ ಆರಕ್ಷಕ ಠಾಣೆ ಅವರು ಭಾಗವಹಿಸಿ, ರಸ್ತೆ ಸುರಕ್ಷತಾ ನಿಯಮಗಳು, ಹೆಲ್ಮೆಟ್ ಧಾರಣೆ, ಸಂಚಾರ ನಿಯಮಗಳ ಪಾಲನೆ, ವಾಹನ ಚಾಲನೆಯ ಸಂದರ್ಭದಲ್ಲಿ ಮೊಬೈಲ್ ಬಳಕೆ ಮಾಡದಿರುವುದು ಹಾಗೂ ವೇಗದ ಮಿತಿಯನ್ನು ಪಾಲಿಸುವ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅದೇ ರೀತಿ, ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯ ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಬಗ್ಗೆ ವಿವರಿಸಿ, ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು ಉತ್ತಮ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಮಕ್ಕಳ ಸುರಕ್ಷತೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಪೋಕ್ಸ್ ಕಾಯ್ದೆಯ ಪ್ರಮುಖ ಅಂಶಗಳ ಬಗ್ಗೆಯೂ ಅರಿವು ಮೂಡಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ B.S. ನಾಯಕ್, ಉಪ ನಿರೀಕ್ಷಕರು, ವಿಟ್ಲ ಆರಕ್ಷಕ ಠಾಣೆ ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳು ಕಾನೂನು ಮತ್ತು ಸಂಚಾರ ನಿಯಮಗಳನ್ನು ಪಾಲಿಸಿ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರೀಶ್ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ವಿಟ್ಲ ಅವರು ವಹಿಸಿದ್ದರು. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಇಂತಹ ಜಾಗೃತಿ ಕಾರ್ಯಕ್ರಮಗಳ ಮಹತ್ವವನ್ನು ಅವರು ವಿವರಿಸಿದರು.

ಕಿರಿಯ ತರಬೇತಿ ಅಧಿಕಾರಿ ಶರತ್ ಕುಮಾರ್ ಎಸ್.ಎಚ್. ಸ್ವಾಗತಿಸಿ, ಜಯಂತ್ ಕಿರಿಯ ತರಬೇತಿ ಅಧಿಕಾರಿ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದ ಸಂಯೋಜನೆಯನ್ನು ಶ್ರೀಮತಿ ರತಿ ವಿ. ಪ್ರಭಾರ ತರಬೇತಿ ಅಧಿಕಾರಿ ಅವರು ವಹಿಸಿದ್ದರು ಹಾಗೂ ಎಲ್ಲಾ ಸಿಬ್ಬಂದಿಗಳು ಸಹಕರಿಸಿದರು.

- Advertisement -

Related news

error: Content is protected !!