Friday, July 31, 2026
spot_imgspot_img
spot_imgspot_img

ವಿಟ್ಲ: ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ

- Advertisement -
- Advertisement -

ಜೆಸಿ ಪೆವಿಲಿಯನ್ ನಲ್ಲಿ 27 ಬಾಲಕರ, 17 ಬಾಲಕಿಯರ ತಂಡಗಳು ಭಾಗಿ

ವಿಟ್ಲ: ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ ಹಾಗೂ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ವಿಟ್ಲ ಇವರ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ 17 ವರ್ಷದೊಳಗಿನ ಬಾಲಕ-ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಇಂದು ಜೇಸಿ ಪೆವಿಲಿಯನ್‌ನಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಅಧ್ಯಕ್ಷ ಶ್ರೀಧರ್ ಶೆಟ್ಟಿ ವಹಿಸಿ, ದೀಪ ಪ್ರಜ್ವಲನೆ ನೆರವೇರಿಸಿ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ರೈ, ತಾಲೂಕಿನ ದೈಹಿಕ ಪರಿವೀಕ್ಷಣಾಧಿಕಾರಿಗಳಾದ ಶ್ರೀಮತಿ ಆಶಾ ನಾಯಕ್, RMSA ಶಾಲೆಯ ದೈಹಿಕ ಶಿಕ್ಷಕ ವಿದ್ಯಾಶಂಕರ್, ಶಾಲಾ ಪ್ರಾಂಶುಪಾಲ ಜಯರಾಮ ರೈ, ಉಪಪ್ರಾಂಶುಪಾಲೆ ಕವಿತಾ ಕೆ.ಜಿ., ಹೇಮಲತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

’ಕ್ರೀಡೆ ದೇಹಕ್ಕೆ ಚೈತನ್ಯ ನೀಡಿದರೆ, ಒಳಾಂಗಣ ಕ್ರೀಡೆಗಳು ಮನಸ್ಸಿಗೆ ಏಕಾಗ್ರತೆ, ತಾಳ್ಮೆ ಹಾಗೂ ಚುರುಕುತನವನ್ನು ಬೆಳೆಸುತ್ತವೆ. ವಿದ್ಯಾರ್ಥಿಗಳು ಕ್ರೀಡಾ ಸ್ಪೂರ್ತಿಯನ್ನು ರೂಢಿಸಿಕೊಂಡು, ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಗುಣವನ್ನು ಬೆಳೆಸಿಕೊಳ್ಳಬೇಕು’ ಎಂದು ತಾಲೂಕು ದೈಹಿಕ ಶಿಕ್ಷಕರ ಸಂಘದ ಗೌರವಾಧ್ಯಕ್ಷ ರಾಜೇಂದ್ರ ರೈ ಅಳಿಕೆ ಹೇಳಿದರು.

ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಆಶಾ ನಾಯಕ್ ಮಾತನಾಡಿ, ಶಾಲೆಯ ಕ್ರೀಡಾ ಸಾಧನೆಗೆ ಅಭಿನಂದನೆ ಸಲ್ಲಿಸಿ ಅಭಿನಂದನಾ ಪತ್ರ ನೀಡಿ ಗೌರವಿಸಿದರು.

ಬಂಟ್ವಾಳ ತಾಲೂಕು ವ್ಯಾಪ್ತಿಯ 27 ಬಾಲಕರ ತಂಡ, 17 ಬಾಲಕಿಯರ ತಂಡ ಸೇರಿ ಒಟ್ಟು 44 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದೆ.

ಶಾಲೆಯ ಸಹಶಿಕ್ಷಕಿ ಸೌಮ್ಯ ಸಾವಿತ್ರಿ ಕಾರ್ಯಕ್ರಮ ನಿರೂಪಿಸಿದರು. ನಮಿತಾ ಸ್ವಾಗತಿಸಿದರು. ಶಶಿಕಲಾ ಕೆ. ವಂದಿಸಿದರು. ದೈಹಿಕ ಶಿಕ್ಷಕರಾದ ಭಾನುಪ್ರಕಾಶ್ ಹಾಗೂ ಶಶಿಕಲಾ ಕೆ. ಕಾರ್ಯಕ್ರಮವನ್ನು ಸಂಯೋಜಿಸಿದರು.

- Advertisement -

Related news

error: Content is protected !!