Sunday, June 14, 2026
spot_imgspot_img
spot_imgspot_img

ವಿಟ್ಲ: ಪಲ್ಸರ್ ಬೈಕ್ ಲಾರಿ ನಡುವೆ ಭೀಕರ ಅಪಘಾತ:ಸವಾರ ಸ್ಥಳದಲ್ಲೇ ಮೃತ್ಯು-ಸಹಸವಾರ ಗಂಭೀರ..!

- Advertisement -
- Advertisement -

ವಿಟ್ಲ: ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಬ್ಬ ಮೃತಪಟ್ಟು ಮತ್ತೊಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ ಪುತ್ತೂರು ರಸ್ತೆಯ ಬದನಾಜೆ ಎಂಬಲ್ಲಿ ಸಂಭವಿಸಿದೆ.

ಬೆಳ್ತಂಗಡಿ ಮಡಂತ್ಯಾರು ನಿವಾಸಿ ಬೈಕ್ ಸವಾರ ರಶೀದ್ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಇಬ್ಬರು ಸವಾರರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಬೈಕ್ ಸವಾರ ರಶೀದ್ ಮೃತಪಟ್ಟಿದ್ದು, ಆತನ ತಂದೆ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನಲ್ಲಿದ್ದವರು ಬೆಳ್ತಂಗಡಿಯ ಮಡಂತ್ಯಾರು ಅಳಕೆ ನಿವಾಸಿಗಳೆಂದು ತಿಳಿದು ಬಂದಿದೆ.ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!