Monday, June 22, 2026
spot_imgspot_img
spot_imgspot_img

ವಿಟ್ಲ: ಬೋಳಂತೂರು ಸಿಂಗಾರಿ ಬೀಡಿ ಮಾಲಕರ ಮನೆಗೆ ನಕಲಿ ಇಡಿ ದಾಳಿ ಪ್ರಕರಣ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ ಅಂತರಾಜ್ಯ ದರೋಡೆಕೋರನ ಬಂಧನ..!

- Advertisement -
- Advertisement -

ಆರೋಪಿ ಸಹಿತ 11,00,000/- ರೂ ಮೌಲ್ಯದ ವಸ್ತುಗಳು ಪೊಲೀಸ್‌ ವಶ

ವಿಟ್ಲ: ಇ ಡಿ ಅಧಿಕಾರಿಗಳ ಸೋಗಿನಲ್ಲಿ ಸಿಂಗಾರಿ ಬೀಡಿ ಮಾಲಿಕನ ಮನೆಗೆ ಬಂದು ನಂಬಿಸಿ, ಮನೆಯ ಶೋಧನೆ ನಡೆಸಿ, ಸುಮಾರು 30 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಅಂತರಾಜ್ಯ ದರೋಡೆಕೋರನನ್ನು ಬಂಧಿಸಿದ್ದಾರೆ. ಬಂಧನಕ್ಕೊಳಗಾದ ಪ್ರಕರಣದ ಪ್ರಮುಖ ಆರೋಪಿಯನ್ನು ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಅನಿಲ್‌ ಫರ್ನಾಂಡಿಸ್‌ (49) ಎಂದು ಗುರುತಿಸಲಾಗಿದೆ.

ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ, ಉದ್ಯಮಿಯೊಬ್ಬರ ಮನೆಗೆ 06 ಜನ ಅಪರಿಚಿತರು ಇ ಡಿ ಅಧಿಕಾರಿಗಳೆಂದು ನಂಬಿಸಿ, ಮನೆಯ ಶೋಧನೆ ನಡೆಸಿ, ಸುಮಾರು 30 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಅ.ಕ್ರ 02/2025 ರಂತೆ ಪ್ರಕರಣ ದಾಖಲಾಗಿತ್ತು.

ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ.ಪಿ.ಎಸ್ ರವರ ಅದೇಶದ ಮೇರೆಗೆ, ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತನಿಖಾ ತಂಡ ರಚಿಸಿ, ಅಪರಾಧಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು. ಈ ಪ್ರಕರಣದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಿಂದ, ಅಪರಾಧ ಪ್ರಕರಣಗಳಲ್ಲಿ ನುರಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ವಿಶೇಷ ತನಿಖಾ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.

ಆರೋಪಿಯಿಂದ ಕೃತ್ಯಕ್ಕೆ ಉಪಯೋಗಿಸಿದ KL-02-BP-1104ನೇ ನೊಂದಣಿ ನಂಬ್ರದ ಎರ್ಟಿಗಾ ಕಾರು, 5,00,000/-ರೂ ನಗದು ಹಾಗೂ ನಕಲಿ ಕೃತ್ಯ ನಡೆಸುವಾಗ ಕಾರಿಗೆ ಅಳವಡಿಸಿದ್ದ ನಕಲಿ TN-20-DB-5517ನೇ ನಂಬರ ಪ್ಲೇಟ್‌ನ್ನು ವಶಪಡಿಸಿಕೊಂಡಿದ್ದು, ಒಟ್ಟು 11,00,000/- ರೂ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!