Wednesday, June 17, 2026
spot_imgspot_img
spot_imgspot_img

ವಿಟ್ಲ: ನಿಯಂತ್ರಣ ತಪ್ಪಿದ ಕಾರೊಂದು ಎರಡು ಬೈಕ್ ಗಳಿಗೆ ಮುಖಾಮುಖಿ ಡಿಕ್ಕಿ!

- Advertisement -
- Advertisement -

ವಿಟ್ಲ: ಕಾರೊಂದು ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ಬೈಕಿನ ಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ.

ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಲೇನೊ ಕಾರು ಚಾಲಕನ ನಿಯಂತ್ರಣ ಕಳೆದು ಎದುರಿನಿಂದ ಬರುತ್ತಿದ್ದ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಒಂದು ಬೈಕಿನ ಸವಾರ ಬುಡೋಳಿ ನಿವಾಸಿ ಅಕ್ಷಯ್ ಎಂಬವರು ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮತ್ತೊಂದು ಬೈಕಿನ ಸವಾರ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!