Thursday, June 4, 2026
spot_imgspot_img
spot_imgspot_img

ವಿಟ್ಲ: ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸು; ಕೊರೊನಾ ನಿಯಂತ್ರಿಸಲು ಲಸಿಕಾ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನ್‌ಲಾಕ್ ಆಗುತ್ತಿದ್ದಂತೆ ಜನರ ವ್ಯಾಪಾರ ವಹಿವಾಟು ಪ್ರಾರಂಭವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಪರಾಹ್ನ 2ರವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅನುಮತಿ ನೀಡಿದ್ದಾರೆ.

ಅಂತೆಯೇ ಜಿಲ್ಲೆಯಲ್ಲಿ ಮಧ್ಯಾಹ್ನದವರೆಗೆ ಕೆಎಸ್‌ಆರ್‌ಟಿಸಿ ಬಸ್ಸುಗಳು ರಸ್ತೆಗಿಳಿದಿದೆ. ಇಂದು ವಿಟ್ಲದಲ್ಲಿ ಪುತ್ತೂರು ಹಾಗೂ ಮಂಗಳೂರಿಗೆ ಮಾತ್ರ ಬಸ್ಸುಗಳ ಸಂಚಾರ ಲಭ್ಯವಾಗಿದೆ. ಶೇಕಡಾ 50 ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶವಿತ್ತು.

ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ವಿಟ್ಲದ ಕೆಎಸ್‌ಆರ್‌ಟಿಸಿ ಬಸ್ ಸ್ಟಾಂಡ್ ನಲ್ಲಿ ಕೋವಿಡ್ ಗಂಟಲು ದ್ರವ ಪರೀಕ್ಷೆ ನಡೆಯಿತು. ಅಂತೆಯೇ ವಿಟ್ಲ ಮಾದರಿ ಶಾಲೆಯಲ್ಲಿ ಶಿಕ್ಷಕರಿಗೆ ಕೊರೊನಾ ವ್ಯಾಕ್ಸಿನೇಶನ್ ಹಮ್ಮಿಕೊಳ್ಳಲಾಗಿತ್ತು.

- Advertisement -

Related news

error: Content is protected !!