Thursday, July 30, 2026
spot_imgspot_img
spot_imgspot_img

ವಿಟ್ಲ: ಬಾಲಕಾರ್ಮಿಕತೆ ನಿಲ್ಲಿಸಿ, ಶಿಕ್ಷಣ ಒದಗಿಸಿ; ಕ್ಯಾಂಪಸ್ ಫ್ರಂಟ್ ವತಿಯಿಂದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ

- Advertisement -
- Advertisement -

ವಿಟ್ಲ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿರುವಂತಹ “ಬಾಲಕಾರ್ಮಿಕತೆ ನಿಲ್ಲಿಸಿ, ಶಿಕ್ಷಣ ಒದಗಿಸಿ.” ಅಭಿಯಾನದ ಭಾಗವಾಗಿ ಕೊಳ್ನಾಡು, ವಿಟ್ಲ ಪಡ್ನೂರು, ಕೊಡಂಗಾಯಿ, ವಿಟ್ಲ ಮುಡ್ನೂರು, ಗೋಳ್ತಮಜಲು, ಮಂಚಿ, ಸಜಿಪ ನಡು, ಸಜಿಪ ಮೂಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮತ್ತು ವಿಟ್ಲ ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.

ಗ್ರಾಮದಲ್ಲಿರುವ ಪ್ರತಿಯೊಂದು ವಿದ್ಯಾರ್ಥಿ ಕೂಡ ಶಿಕ್ಷಣದಿಂದ ವಂಚಿತರಾಗಬಾರದು , ಬಾಲ ಕಾರ್ಮಿಕತೆಗೆ ಒಳಗಾದ ಮಕ್ಕಳಿದ್ದರೆ ಅವರಿಗೆ ಶಿಕ್ಷಣ ಒದಗಿಸುವ ಯೋಜನೆಯನ್ನು ಸರ್ಕಾರ ರೂಪಿಸಬೇಕು, ಕಾರ್ಯಾಂಗ ವ್ಯವಸ್ಥೆಯನ್ನು ಸರಿಯಾಗಿ ಸದುಪಯೋಗಪಡಿಸಿ ತಳ ಮಟ್ಟದಲ್ಲಿ ಅಂದರೆ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆಯ ಅಡಿಯಲ್ಲಿ ಬಾಲ ಕಾರ್ಮಿಕತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದ ಬಗ್ಗೆ ಸರಕಾರ ಚಿಂತಿಸಬೇಕಾಗಿದೆ ಎಂದು ಆಗ್ರಹಿಸಿ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಪಾಧ್ಯಕ್ಷ ಸಂಶುದ್ದೀನ್ ಮತ್ತು ಉಪಾಧ್ಯಕ್ಷರಾದ ಇರ್ಶಾದ್ ಮತ್ತು ಸಮಿತಿ ಸದಸ್ಯರಾದ ಮುಕ್ತಾರ್, ನಾಸಿರ್ ಮತ್ತು ಯುನಿಟ್ ನಾಯಕರಾದಂತಹ ನಿಹಾಲ್, ಮಕ್ಶಿದ್, ಅನ್ವರ್, ಜಾಫರ್, ಮತ್ತು ಸದಸ್ಯರು ಉಪಸ್ಥಿತರಿದ್ಧರು.

- Advertisement -

Related news

error: Content is protected !!