Thursday, April 25, 2024
spot_imgspot_img
spot_imgspot_img

ವಿಟ್ಲ: ವಿಟ್ಲಮುಡ್ನೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಕಲುಷಿತ ಕುಡಿಯುವ ನೀರು ಸರಬರಾಜು

- Advertisement -G L Acharya panikkar
- Advertisement -

ವಿಟ್ಲ : ವಿಟ್ಲಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 3ನೇ ವಾರ್ಡಿನ ಚಪ್ಡಿಯಡ್ಕ, ಕಟ್ಟತ್ತಿಲ ಪರಿಸರದ ಮನೆಗಳಿಗೆ ಕಲುಷಿತ ನೀರು ಸರಬರಾಜು ಮಾಡಲಾಗುತ್ತಿದೆ. ಮನೆಗಳ ನಲ್ಲಿಗಳಲ್ಲಿ ಕಲುಷಿತ ನೀರು ಸರಬರಾಜು ಮಾಡುತ್ತಿರುವ ಕುರಿತು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂವತ್ತಕ್ಕೂ ಹೆಚ್ಚು ಮನೆಗಳಿಗೆ ಕೊಳಕು ನೀರು ಸಂಪರ್ಕವಾಗುತ್ತಿದ್ದು. ಇದು ಕುಡಿಯಲು ಸೇರಿದಂತೆ ಯಾವುದಕ್ಕೂ ಉಪಯೋಗಕ್ಕೆ ಬಾರದಂತಿದ್ದು, ಈ ನೀರನ್ನು ಉಪಯೋಗಿಸಿದರೆ ಹಲವು ಕಾಯಿಲೆಗಳಿಗೆ ತುತ್ತಾಗುವುದು ನಿಶ್ಚಿತ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರತಿನಿಧಿಯೊಬ್ಬರು ಕುಂಡಡ್ಕ ಗ್ರಾಮ ಪಂಚಾಯತ್ ಪಿಡಿಓಗೆ ಕರೆ ಮಾಡಿ ಮನೆಗಳಿಗೆ ಕಲುಷಿತ ನೀರು ಸರಬರಾಜು ಆಗುತ್ತಿರುವ ಬಗ್ಗೆ ವಿಚಾರಿಸಿದಾಗ, ನಮಗೆ ಯಾವುದೇ ರೀತಿಯ ದೂರು ಬಂದಿಲ್ಲ ಎಂದಿದ್ದಾರೆ. ಅಲ್ಲದೇ ತಕ್ಷಣವೇ ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ತೇನೆಂದು ಪ್ರತಿಕ್ರಿಯಿಸಿದ್ದಾರೆ. ಶುದ್ಧ ನೀರನ್ನು ಸರಬರಾಜುಮಾಡಲು ಕೂಡಲೇ ಸಂಬ0ಧಪಟ್ಟವರು ಸರಿಯಾದ ಕ್ರಮ ಕೈಗೊಳ್ಳ ಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

driving
- Advertisement -

Related news

error: Content is protected !!