Tuesday, July 21, 2026
spot_imgspot_img
spot_imgspot_img

ವಿಟ್ಲ: (ಡಿ.31-ಜ.1) ಎರುಂಬು ಶ್ರೀ ವಿಷ್ಣುಮೂರ್ತಿ (ಮಂಗಲ) ದೇವಸ್ಥಾನದಲ್ಲಿ 23ನೇ ವರ್ಷದ ಅಖಂಡ ಭಜನಾ ಕಾರ್ಯಕ್ರಮ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ಎರುಂಬು ಶ್ರೀ ವಿಷ್ಣುಮೂರ್ತಿ (ಮಂಗಲ) ದೇವಸ್ಥಾನದಲ್ಲಿ 23ನೇ ವರ್ಷದ ಅಖಂಡ ಭಜನಾ ಕಾರ್ಯಕ್ರಮ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಡಿ.31 ಮತ್ತು ಜ.1ರಂದು ನಡೆಯಲಿದೆ.

ದಿನಾಂಕ 31-12-2023ನೇ ಆದಿತ್ಯವಾರ ಬೆಳಗ್ಗೆ 6 ಗಂಟೆಗೆ ಗಣಪತಿ ಹವನ ಮತ್ತು ದೀಪ ಪ್ರಜ್ವಲನದೊಂದಿಗೆ ಅಖಂಡ ಭಜನಾ ಕಾರ್ಯಕ್ರಮ ಪ್ರಾರಂಭಗೊಳ್ಳಲಿದೆ. ಎರುಂಬು ಶ್ರೀ ಶಂಕರನಾರಾಯಣ ದೇವಸ್ಥಾನದ ಅರ್ಚಕ ಮಂಜುನಾಥ ಆಚಾರ್ಯ ದೀಪ ಬೆಳಗಿಸಲಿದ್ದಾರೆ. ಬಳಿಕ ಶ್ರೀ ವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ಪಂಚಾಮೃತಭಿಷೇಕ, ನಾಗಸನ್ನಿಧಿಯಲ್ಲಿ ನಾಗತಂಬಿಲ, ಆಶ್ಲೇಷಬಲಿ ಪೂಜೆ, ಅಶ್ವತ್ಥ ಕಟ್ಟೆಯಲ್ಲಿ ಅಶ್ವತ್ಥ ನಾರಾಯಣ ಪೂಜೆ ನಡೆಯಲಿದೆ. ಬಳಿಕ ಶ್ರೀ ವಿಷ್ಣುಸಹಸ್ರನಾಮ ಪಾರಾಯಣ, ಮಧ್ಯಾಹ್ನ ಮಹಾಮಂಗಳಾರತಿ, ಬಲಿವಾಡು ಕೂಟ, ಅನ್ನಪ್ರಸಾದ ನಡೆಯಲಿದೆ. ರಾತ್ರಿ ವಿಷ್ಣು ಸನ್ನಿಧಿಯಲ್ಲಿ ವಿಶೇಷ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.

ದಿನಾಂಕ 1-1-2024ನೇ ಸೋಮವಾರ ಪ್ರಾತಃಕಾಲ ಗಂಟೆ 5ಕ್ಕೆ ದೇವರಿಗೆ ಅಭಿಷೇಕ, ಬಳಿಕ ಭಜನಾ ಮಂಗಲೋತ್ಸವ, ಶ್ರೀ ದೇವರಿಗೆ ಮಹಾ ಮಂಗಳಾರತಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!