- Advertisement -
- Advertisement -




ವಿಟ್ಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಟ್ಲ ಭ| ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ| ೧೦೦೮ ಶ್ರೀ ಮಹಾವರ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ ಹಾಗೂ ಶ್ರೀ ಯಕ್ಷಿ ಪದ್ಮಾವತಿ ಅಮ್ಮನವರ ಮತ್ತು ಶ್ರೀ ಯಕ್ಷಿ ಜ್ವಾಲಾಮಾಲಿನಿ ಅಮ್ಮನವರ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮ ಫೆ. 13 ರಿಂದ ಫೆ. 17 ರವರೆಗೆ ನಡೆಯಲಿದೆ.
ಈ ಪ್ರಯುಕ್ತ ಫೆ. 2 ರಂದು ಅರ್ಕುಳದಿಂದ ಚಂದ್ರನಾಥ ಸ್ವಾಮಿಯ ಮೂರ್ತಿ ವಿಟ್ಲ ಜೈನಬಸದಿಗೆ ಆಗಮನವಾಗಲಿದೆ.
ಚಂದ್ರನಾಥ ಸ್ವಾಮಿಯ ಮೂರ್ತಿಯು ಬೆಳಗ್ಗೆ 9 ಗಂಟೆಗೆ ವಿಟ್ಲ ಮಂಗಳೂರು ರಸ್ತೆಯ ಬೊಬ್ಬೆಕೇರಿಯಲ್ಲಿ ಭಕ್ತಾದಿಗಳಿಂದ ಅದ್ದೂರಿ ಸ್ವಾಗತದ ಮೂಲಕ ಬರಮಾಡಿಕೊಳ್ಳಾಗುವುದು. ನಂತರ ವಿಟ್ಲ ಜೈನ ಬಸದಿಗೆ ಆಕರ್ಷಣೀಯ ಮೆರವಣಿಗೆ ಕುಣಿತ ಭಜನೆಯ ಮೂಲಕ ತರಲಾಗುವುದು.
- Advertisement -