ಭ। ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ। ಶ್ರೀ ೧೦೦೮ ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ ಮತ್ತು ಬಿಂಬ ಪ್ರತಿಷ್ಠೆ
ಯಕ್ಷಿ ಶ್ರೀ ಪದ್ಮಾವತಿ ಅಮ್ಮನವರ ಮತ್ತು ಯಕ್ಷಿ ಶ್ರೀ ಜ್ವಾಲಾಮಾಲಿನಿ ಅಮ್ಮನವರ ಪ್ರತಿಷ್ಠಾ ಮಹೋತ್ಸವ




ವಿಟ್ಲ: ಭ। ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ। ಶ್ರೀ ೧೦೦೮ ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ ಹಾಗೂ ಯಕ್ಷಿ ಶ್ರೀ ಪದ್ಮಾವತಿ ಅಮ್ಮನವರ ಮತ್ತು ಯಕ್ಷಿ ಶ್ರೀ ಜ್ವಾಲಾಮಾಲಿನಿ ಅಮ್ಮನವರ ಪ್ರತಿಷ್ಠಾ ಮಹೋತ್ಸವವು 13-02-2025ನೇ ಗುರುವಾರದಿಂದ 17-02-2025ನೇ ಸೋಮವಾರದವರೆಗೆ ನಡೆಯಲಿದೆ.

ದಿನಾಂಕ: 13-02-2025ನೇ ಗುರುವಾರ ಬೆಳಿಗ್ಗೆ 06:55ರಿಂದ ಇಂದ್ರ ಪ್ರತಿಷ್ಠೆ, 07:55ರ ಕುಂಭ ಲಗ್ನದಲ್ಲಿ ತೋರಣ ಮುಹೂರ್ತ, ವಿಮಾನಶುದ್ಧಿ ವಿಧಾನ, ದಿವಾಗಂಟೆ 12:15ರ ಅಭಿಜಿನ್ ಲಗ್ನದಲ್ಲಿ ಮುಖವಸ್ತ್ರ ಉದ್ಘಾಟನೆ, ಅಪರಾಹ್ನ 02:00 ರಿಂದ ನಾಂದಿ ಮಂಗಲ ಪೂಜಾ ವಿಧಾನ, ವಾಸ್ತು ಪೂಜಾ ವಿಧಾನ, ನವಗ್ರಹ ಮಹಾಶಾಂತಿ, ದಿಕ್ಷಾಲಕ ಬಲಿ ವಿಧಾನ, ಮತ್ತಿಕಾ ಸಂಗ್ರಹಣೆ, ಅಂಕುರಾರ್ಪಣೆ ನಡೆಯಲಿದೆ. ಬಳಿಕ ಸಂಜೆ 05:05ರ ಕರ್ಕಾಟಕ ಲಗ್ನದಲ್ಲಿ ಪಂಚಕಲ್ಯಾಣ ಮಂಟಪ ಪ್ರವೇಶ, ಸಂಜೆ 06:45ರ ಸಿಂಹ ಲಗ್ನದಲ್ಲಿ ಶ್ರೀ ಕ್ಷೇತ್ರಪಾಲ ಪ್ರತಿಷ್ಠೆ, ಸಂಜೆ 4:30ಕ್ಕೆ ಅನ್ನೋದಕ ಮೆರವಣಿಗೆ, ಅಭಿಷೇಕ ಪೂಜೆ, ಮಹಾಮಂಗಳಾರತಿ ನಡೆಯಲಿದೆ.
ಸಂಜೆ 5:00ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಶ್ರೀ ಜೈನಮಠ ಮೂಡಬಿದಿರೆ ಪರಮಪೂಜ್ಯ ಭಾರತಭೂಷಣ ಸ್ವಸ್ತಿಶ್ರೀ ಡಾ॥ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾಸ್ವಾಮಿ, ಶ್ರೀ ಜೈನಮಠ, ಕಾರ್ಕಳ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಆಶೀರ್ವಚನ ಮತ್ತು ಪಾವನ ಸಾನ್ನಿಧ್ಯ ನೀಡಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೆರಿಸಲಿದ್ದಾರೆ. ಬಂಗಾರು ಅರಸರು, ವಿಟ್ಲ ಅರಮನೆ ಗೌರವ ಉಪಸ್ಥಿತರಿರುವರು. ಮಂಗಳೂರು ಲೋಕಸಭಾ ಕ್ಷೇತ್ರ ಸಂಸದ ಕ್ಯಾ| ಬ್ರಿಜೇಶ್ ಚೌಟ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅರಳ ರಾಜೇಂದ್ರ ಶೆಟ್ಟಿ, ಕರ್ನಾಟಕ ಸರಕಾರ ಮಾಜಿ ಸಚಿವ ಅಭಯಚಂದ್ರ ಜೈನ್, ಸುರೇಶ ಬಲ್ಲಾಳ್, ಬಲ್ಲಾಳ್ಬಾಗ್, ಮಂಗಳೂರು ಗೌರವಾನ್ವಿತ ಅತಿಥಿಗಳಾಗಿ ಉಪಸ್ಥಿತರಿರುವರು. ರಾತ್ರಿ 7:00ರಿಂದ ಡೈನಾಮಿಕ್ ಡ್ಯಾನ್ಸ್ ಫ್ಯಾಕ್ಟರಿ ಉಜಿರೆ, ಇವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ದಿನಾಂಕ:14-02-2025ನೇ ಶುಕ್ರವಾರ ಬೆಳಿಗ್ಗೆ 8.00ರಿಂದ ನಿತ್ಯ ವಿಧಿ ಸಹಿತ ಶ್ರೀ ಪೀಠ ಯಂತ್ರಾರಾಧನಾ ವಿಧಾನ ನಡೆದು, ದಿವಾಗಂಟೆ 10:35ರ ಮೇಷ ಲಗ್ನದಲ್ಲಿ ಶ್ರೀ ನಾಗದೇವರ ಪ್ರತಿಷ್ಠೆ, ಯಕ್ಷಾರಾಧನಾಪೂರ್ವಕ ಯಕ್ಷಪ್ರತಿಷ್ಠೆ ಬಳಿಕ, ದಿವಾಗಂಟೆ 12:15ರ ಅಭಿಜಿನ್ ಲಗ್ನದಲ್ಲಿ ಧ್ವಜಾರೋಹಣ, ಧ್ವಜ ಪೂಜೆ, ಶ್ರೀಬಲಿ ವಿಧಾನ, ಮಂಟಪ ಪ್ರತಿಷ್ಠೆ, ಯಾಗಮಂಡಲ ಆರಾಧನಾವಿಧಾನ ನಡೆಯಲಿದೆ. ಸಂಜೆ 04.35ರ ಕರ್ಕಾಟಕ ಲಗ್ನದಲ್ಲಿ ಶ್ರೀ ಯಕ್ತಿ ಜ್ವಾಲಾಮಾಲಿನಿ ದೇವಿ ಪ್ರತಿಷ್ಠೆ ಬಳಿಕ, ಸಂಜೆ 05:35ರ ಕರ್ಕಾಟಕ ಲಗ್ನದಲ್ಲಿ ಶ್ರೀ ಯಕ್ಷಿ ಪದ್ಮಾವತಿ ದೇವಿ ಪ್ರತಿಷ್ಠೆ, ಜಲಯಾತ್ರಾ ಮಹೋತ್ಸವ ನಡೆಯಲಿದೆ. ರಾತ್ರಿ 07:30ರಿಂದ ಮಾತುರಾಹ್ವಾನಾದಿ ಕ್ರಿಯಾಯುಕ್ತಾ ಗರ್ಭಾವತರಣ ಕಲ್ಯಾಣ, ಭೇರಿತಾಡನ, ಮಂಗಲಸೂತ್ರ ಬಂಧನ, 24 ಕಲಶ ಅಭಿಷೇಕ, ಮಹಾಪೂಜೆ ನಡೆಯಲಿದೆ.
ಸಂಜೆ 5:30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಶ್ರೀ ಜೈನಮಠ, ಮೂಡುಬಿದಿರೆ ಪರಮಪೂಜ್ಯ ಭಾರತಭೂಷಣ ಸ್ವಸ್ತಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಆಶೀರ್ವಚನ ಮತ್ತು ಪಾವನ ಸಾನ್ನಿಧ್ಯ ನೀಡಲಿದ್ದಾರೆ. ಪರಮಪೂಜ್ಯ ಶ್ರೀ ಸಚ್ಚಿದಾನಂದಭಾರತೀ ಮಹಾಸ್ವಾಮಿ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ, ಶ್ರೀ ಎಡನೀರು ಮಠ, ಕಾಸರಗೋಡು, ಶ್ರೀಧಾಮ ಮಾಣಿಲ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದಿವ್ಯ ಉಪಸ್ಥಿತರಿರುವರು. ಶ್ರೀ ಕ್ಷೇತ್ರ ಧರ್ಮಸ್ಥಳ ಡಿ. ಸುರೇಂದ್ರ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಲ್ಕಿ ಅರಮನೆ ಮುಲ್ಕಿ ಸೀಮೆ ಅರಸರು ಎಂ. ದುಗ್ಗಣ್ಣ ಸಾವಂತ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಶ್ರೀ ಚಂದ್ರನಾಥ ಸ್ವಾಮಿ ಬಸದಿ, ಕಳಸ ಜೀರ್ಣೋದ್ಧಾರ ಸಮಿತಿ, ಕಾಫಿ ಪ್ಲಾಂಟರ್, ಕೆ. ಸಿ. ಧರಣೇಂದ್ರ, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನಾಯ್ತೋಟ್ಟು, ಶ್ರೀನಿವಾಸ ರೈ, ಕುಂಡಕೋಳಿ ,ಕೇಪು, ಮೂಡುಗಿಳಿಯಾರು ಜನಸೇವಾ ಟ್ರಸ್ಟ್ ಪ್ರವರ್ತಕ ವಸಂತ್ ಗಿಳಿಯಾರ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ರಾತ್ರಿ 7:00ರಿಂದ ಕಲಾಮಯಂ, ಉಡುಪಿ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ದಿನಾಂಕ:15-02-2025ನೇ ಶನಿವಾರ ಬೆಳಿಗ್ಗೆ 8:00ರಿಂದ ನಿತ್ಯವಿಧಿ ಬಳಿಕ 09:25ರ ಮೀನ ಲಗ್ನದಲ್ಲಿ ಜಿನಬಾಲಕನ ಜನ್ಮಕಲ್ಯಾಣ ಅಷ್ಟದಿಕ್ಷು ಧಾಮ ಸಂಪ್ರೋಕ್ಷಣೆ, ಚತುರ್ದಿಕ್ಷು ಹೋಮ, ಗ್ರಹಯಜ್ಞ ವಿಧಾನ, ಜಲಾಗ್ನಿ ಹೋಮ ಪಾಂಡುಕಾಶಿಲೋಪರಿ ೧೦೮ ಕಲಕಗಳಿಂದ ಜಿನಬಾಲಕನ ಜನ್ಮಾಭಿಷೇಕ, ನಾಮಕರಣ, ಬಾಲಲೀಲಾ ಮಹೋತ್ಸವ ನಡೆದು ಅಪರಾಹ್ನ 02:00ರಿಂದ ರಾಜ್ಯಾಭಿಷೇಕ ಬಳಿಕ ಸಂಜೆ 5:25ರ ಕರ್ಕಾಟಕ ಲಗ್ನದಲ್ಲಿ ವೈರಾಗ್ಯಪೂರ್ವಕ ದೀಕ್ಷಾ ವಿಧಿ, ಪರಿನಿಷ್ಟಮಣ ಕಲ್ಯಾಣ. ೧೪ ಕಲಕ ಅಭಿಷೇಕ, ಮಹಾಪೂಜೆ ನಡೆಯಲಿದೆ.
ಸಂಜೆ 5:30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪರಮಪೂಜ್ಯ ಭಾರತಭೂಷಣ ಸ್ವಸ್ತಿಶ್ರೀ ಡಾ॥ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಶ್ರೀ ಜೈನಮಠ ಮೂಡುಬಿದಿರೆ, ಪರಮಪೂಜ್ಯ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಶ್ರೀ ಸಿಂಹನಗದ್ದೆ ಬಸ್ತಿ ಮಠ, ನರಸಿಂಹರಾಜಪುರ ಆಶೀರ್ವಚನ ಮತ್ತು ಪಾವನ ಸಾನ್ನಿಧ್ಯ ನೀಡಲಿದ್ದಾರೆ. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್, ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ದಿವ್ಯ ಉಪಸ್ಥಿತರಿರುವರು. ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀಮತಿ ಅನಿತಾ ಡಿ. ಸುರೇಂದ್ರ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಅಶೋಕ್ ಕುಮಾಋ ರೈ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ನೇರವೆರಿಸಲಿದ್ದಾರೆ. ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್, ದ.ಕ. ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಂಗಳೂರು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ, ಮಂಗಳೂರು ಜೈನ್ ಮಿಲನ್ ಅಧ್ಯಕ್ಷ ರತ್ನಾಕರ್ ಜೈನ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.ರಾತ್ರಿ 7:00ರಿಂದ ಉಜಿರೆ ಎಸ್. ಡಿ. ಎಂ. ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಎಸ್.ಡಿ.ಎಂ. ಕಲಾ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ದಿನಾಂಕ:16-02-2025ನೇ ರವಿವಾರ ಬೆಳಿಗ್ಗೆ 7:00ರಿಂದ ನಿತ್ಯವಿಧಿ ಸಹಿತ ಆಹಾರದಾನ ವಿಧಿ ಶ್ರೀಗಂಧಯಂತ್ರಾರಾಧನಾ ವಿಧಾನ ನಡೆದು ದಿವಾಗಂಟೆ 9: 22 ರಿಂದ 9.32 ರ ಮೀನ ಲಗ್ನದಲ್ಲಿ ಮಂತ್ರನ್ಯಾಸ ಪೂರ್ವಕ ಭಗವಾನ್ ಶ್ರೀ ಚಂದ್ರನಾಥ ತೀರ್ಥಂಕರರ ಮತ್ತು ಭಗವಾನ್ ಶ್ರೀ ಮಹಾವೀರ ತೀರ್ಥಂಕರರ ಕೇವಲಜ್ಞಾನ ಕಲ್ಯಾಣ, ಮುಖವಸ್ಥ ಉದ್ಘಾಟನೆ ನಡೆಯಲಿದೆ. ದಿವಾಗಂಟೆ 1:05ರ ಅಭಿಜಿನ್ ಲಗ್ನದಲ್ಲಿ ಶಿಖರಾರೋಹಣ ಬಳಿಕ ಮಧ್ಯಾಹ್ನ ಗಂಟೆ 2:00ಕ್ಕೆ ಸಮವಸರಣ ಪೂಜೆ, ಯಾಗಮಂಡಲ ಯಂತ್ರಾರಾಧನಾ ವಿಧಾನ, ಸಿದ್ಧ ಚಕ್ರ ಯಂತ್ರಾರಾಧನಾ ವಿಧಾನ, ಅಗ್ನಿತ್ರಯಾರ್ಚನಾ ಪೂರ್ವಕ ನಿರ್ವಾಣ ಕಲ್ಯಾಣ, ಅನ್ನೋದಕ ಮೆರಮಣಿಗೆ, ೧೦೮ ಕಲಶ ಅಭಿಷೇಕ, ಮಹಾಪೂಜೆ ನಡೆಯಲಿದೆ.
ಸಂಜೆ 5:30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪರಮಪೂಜ್ಯ ಭಾರತಭೂಷಣ ಸ್ವಸ್ತಿಶ್ರೀ ಡಾ| ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಶ್ರೀ ಜೈನಮಠ, ಮೂಡುಬಿದಿರೆ, ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಶ್ರೀ ಜೈನ ಮಠ, ಕಾರ್ಕಳ ಇವರು ಆಶೀರ್ವಚನ ಮತ್ತು ಪಾವನ ಸಾನ್ನಿಧ್ಯ ನೀಡಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಡಿ. ಹರ್ಷೇಂದ್ರ ಕುಮಾರ್ ರತ್ನಾಕರರಾಜ್ ಅರಸು ಕಿನ್ಯಕ್ಕೆ ಬಲ್ಲಾಳ, ಅರ್ಕುಳ ಬೀಡು ವಜ್ರನಾಭ ಶೆಟ್ಟಿ, ಕರ್ನಾಟಕ ಸರಕಾರ ಮಾಜಿ ಸಚಿವ ರಮಾನಾಥ ರೈ, ವಿಟ್ಲ ಉದ್ಯಮಿ ರಾಧಾಕೃಷ್ಣ ನಾಯಕ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ರಾತ್ರಿ 7: 00ರಿಂದ ಮಂಗಳೂರಿನ ಜೈನ ಸಮಾಜದವರಿಂದ ಶ್ರೀ ಸುಕುಮಾರ್ ಬಲ್ಲಾಳ್, ಮಂಗಳೂರು ಇವರ ಸಾಹಿತ್ಯ ಮತ್ತು ನಿರ್ದೇಶನದ ಭಗವಾನ್ ಶ್ರೀ ಚಂದ್ರನಾಥ ತೀರ್ಥಂಕರರ ಪಂಚಕಲ್ಯಾಣ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ದಿನಾಂಕ:17-02-2025ನೇ ಸೋಮವಾರ ಬೆಳಿಗ್ಗೆ 8:30ರಿಂದ ನಿತ್ಯವಿಧಿ ಸಹಿತ ಸರ್ವರಕ್ಷಾಯಂತ್ರಾರಾಧನಾ ನಡೆದು , ಸಂಜೆ 4:30ಕ್ಕೆ ಅಗೋದಕ ಮೆರವಣಿಗೆ, ೧೦೦೮ ಕಲಶಗಳಿಂದ ಮಹಾಭಿಷೇಕ ಮಹೋತ್ಸವ, ಮಹಾಪೂಜೆ, ಮಹಾಮಂಗಳಾರತಿ, ಶ್ರೀಗಳವರ ಪಾದಪೂಜೆ, ಕುಂಕುಮೋತ್ಸವ, ಧ್ವಜಾವರೋಹಣ, ತೋರಣ ವಿಸರ್ಜನೆ ಮತ್ತು ಕಂಕಣ ವಿಸರ್ಜನೆ ನಡೆಯಲಿದೆ.
ಸಂಜೆ 5:30ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ರಮಪೂಜ್ಯ ಭಾರತಭೂಷಣ ಸ್ವಸ್ತಿಶ್ರೀ ಡಾ॥ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಶ್ರೀ ಜೈನಮಠ, ಮೂಡುಬಿದಿರೆ, ಪರಮಪೂಜ್ಯ ಶ್ರೀಮದ್ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಅತಿಶಯ ಕ್ಷೇತ್ರ, ಶ್ರೀ ಜೈನ ಮಠ, ಹೊಂಬುಜ ಇವರು ಆಶೀರ್ವಚನ ಮತ್ತು ಪಾವನ ಸಾನ್ನಿಧ್ಯ ನೀಡಲಿದ್ದಾರೆ. ವಜ್ರದೇಹಿ ಮಠ ಗುರುಪುರ ಪರಮಪೂಜ್ಯ ಶ್ರೀ ರಾಜಶೇಖರಾನಂದ ಸ್ವಾಮೀಜಿ ದಿವ್ಯ ಉಪಸ್ಥಿತರಿರುವರು. ಭಾರತೀಯ ಜೈನ್ ಮಿಲನ್, ವಲಯ-8 ಉಪಾಧ್ಯಕ್ಷ ಸುದರ್ಶನ್ ಜೈನ್ ಪಂಜಿಕಲ್ಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಚೌಟರ ಅರಮನೆ, ಮೂಡುಬಿದಿರೆ ಕುಲದೀಪ್ ಎಂ., ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್, ಎಂ.ಡಿ., ಪವರ್ ಟಿವಿ, ಬೆಂಗಳೂರು ರಾಕೇಶ್ ಶೆಟ್ಟಿ, ವಿಟ್ಲ ಉದ್ಯಮಿ ಹೆಚ್. ಜಗನ್ನಾಥ ಸಾಲ್ಯಾನ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ರಾತ್ರಿ 7:00ರಿಂದ ಶಾರದಾ ಆರ್ಟ್ಸ್ ಕಲಾವಿದರು (ರಿ.), ಮಂಜೇಶ್ವರ ಅಭಿನಯಿಸುವ ಗಡಿನಾಡ ಕಲಾನಿಧಿ ಕೃಷ್ಣ ಜಿ. ಮಂಜೇಶ್ವರ ಇವರ ಸಾರಥ್ಯದ “ಕಥೆ ಎಡ್ಡೆಂಡು” ತುಳು ಹಾಸ್ಯಮಯ ನಾಟಕ ನಡೆಯಲಿದೆ.
