Friday, November 20, 2026
spot_imgspot_img
spot_imgspot_img

ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟ: ಲಾರಿ ವಶಕ್ಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ವಿಟ್ಲ: ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಪರವಾನಿಗೆ ಇಲ್ಲದೆ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡು, ಚಾಲಕ ಮತ್ತು ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ನ. 19ರಂದು ಮಧ್ಯಾಹ್ನ, ಅಕ್ರಮ ಕಲ್ಲು ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ. ಕೆ ಅವರು ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ವೇಳೆ KA-19-AA-0601 ನೋಂದಣಿಯ ಲಾರಿಯನ್ನು ತಡೆದು ತಪಾಸಣೆ ನಡೆಸಿದಾಗ, ಯಾವುದೇ ಪರವಾನಿಗೆ ಅಥವಾ ದಾಖಲಾತಿ ಇಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಕೂಡಲೇ ಲಾರಿಯನ್ನು ಸ್ವಾಧೀನಪಡಿಸಿಕೊಂಡ ಪೊಲೀಸರು, ಆರೋಪಿ ಚಾಲಕ ಮೊಹಮ್ಮದ್ ರಫೀಕ್(62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ಅವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 237/2026 ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

BNS 2023 ಕಲಂ 303(2), MMDR ಕಾಯ್ದೆ 1957 ಕಲಂ 4(1), 21 ಹಾಗೂ ಕರ್ನಾಟಕ ಮೈನರ್ ಮಿನರಲ್ ಕನ್ಸಿಸ್ಟೆಂಟ್ ರೂಲ್ಸ್ 1994 ಕಲಂ 3, 44 ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!