- Advertisement -
- Advertisement -




ವಿಟ್ಲ: ಸೆ.18 ರಂದು ಸ್ಕೌಟ್ ಗೈಡ್ ಭವನ ಪಿಲಿಕುಳದಲ್ಲಿ ನಡೆದ ಜಿಲ್ಲಾ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಗೈಡ್ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಿಲ್ಲೆಯ ವಿವಿಧ ಶಾಲೆಗಳ ತಂಡಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ವಿಟ್ಲ ಜೇಸಿಸ್ ಶಾಲೆಯ ವಿದ್ಯಾರ್ಥಿಗಳು ತಮ್ಮ ಸುಶ್ರಾವ್ಯ ಗಾಯನದ ಮೂಲಕ ತೀರ್ಪುಗಾರರ ಮೆಚ್ಚುಗೆ ಗಳಿಸಿದರು.

ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದು, ರಾಜ್ಯ ಮಟ್ಟದ ಸ್ಪರ್ಧೆಗೂ ಶುಭ ಹಾರೈಸಿದ್ದಾರೆ.
- Advertisement -








