Monday, March 8, 2021

ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ

ವಿಟ್ಲ: ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 72ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಜಯರಾಮ ರೈಯವರು ಧ್ವಜಾರೋಹಣ ನೆರವೇರಿಸಿದರು.

ಸಮಾಜಶಾಸ್ತ್ರ ಶಿಕ್ಷಕರಾದ ಶ್ರೀ ಗುರುವಪ್ಪ ನಾಯ್ಕರವರು ಪ್ರಜಾಪ್ರಭುತ್ವ ದಿನದ ಮಹತ್ವದ ಕುರಿತು ಮಾತನಾಡಿದರು. ಶಾಲಾ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ವಾಚಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಅಧಿಕಾರಿಯವರಾದ ಶ್ರೀ ರಾಧಾಕೃಷ್ಣ ಎ, ಉಪಪ್ರಾಂಶುಪಾಲರಾದ ಶ್ರೀಮತಿ ಜ್ಯೋತಿ ಶೆಣೈ ,ಶ್ರೀಮತಿ ಹೇಮಲತಾ ಹಾಗೂ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಜರಿದ್ದರು. ಎಲ್ಲರಿಗೂ ಸಿಹಿ ತಿಂಡಿ ಹಂಚಲಾಯಿತು.

- Advertisement -

MOST POPULAR

HOT NEWS

Related news

error: Content is protected !!