Wednesday, May 15, 2024
spot_imgspot_img
spot_imgspot_img

ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಅಂತರ್ಜಾಲ ಶಿಕ್ಷಣ ವ್ಯವಸ್ಥೆ ಜ್ಞಾನತಾಣ ಕಾರ್ಯಕ್ರಮ ಉದ್ಘಾಟನೆ

- Advertisement -G L Acharya panikkar
- Advertisement -

ವಿಟ್ಲ (ನ 9 ): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ, ಇದರ ಆಶ್ರಯದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಅಂತರ್ಜಾಲ ಶಿಕ್ಷಣ ವ್ಯವಸ್ಥೆ ಜ್ಞಾನತಾಣ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಯೋಜನಾ ಕಚೇರಿಯಲ್ಲಿ ಶ್ರೀ ಕೃಷ್ಣಯ್ಯ ಬಲ್ಲಾಳ್ ವಲಯಾಧ್ಯಕ್ಷರು ಜನಜಾಗೃತಿ ವೇದಿಕೆ ವಿಟ್ಲ ವಲಯ ,ಆಡಳಿತ ಮೊಕ್ತೇಸರರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇವರು ನೇರವೇರಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕಿನ ಯೋಜನಾಧಿಕಾರಿ ಶ್ರೀ ಪಿ ಚೆನ್ನಪ್ಪ ಗೌಡ, ಇವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಈ ಯೋಜನೆಯು ಶ್ರೀ ಕ್ಷೇತ್ರ ಧರ್ಮಸ್ಥಳ ಪೂಜ್ಯ ವೀರೇಂದ್ರ ಹೆಗ್ಗೆಡಯವರ ಆಶಯದಂತೆ ಕರ್ನಾಟಕ ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ “ಜ್ಞಾನತಾಣ” ಕಾರ್ಯಕ್ರಮದ ಮೂಲಕ ಮನೆಯಲ್ಲಿಯೇ ಕುಳಿತು ಶಿಕ್ಷಣ ಪಡೆಯುವ ತಂತ್ರಾಶ ಯೋಜನೆ. ಕೋವಿಡ್ ಸಮಸ್ಯೆಯಿಂದ ಶಾಲೆಗಳು ಮುಚ್ಚಿರುವ ಈ ಸಂಧರ್ಭವನ್ನು ಉಪಯೋಗಿಸಿಕೊಂಡು ಗ್ರಾಮೀಣ ಮಕ್ಕಳಲ್ಲಿ ಅಂತರ್ಜಾಲ ಶಿಕ್ಷಣದ ಮಹತ್ವವನ್ನು ತಿಳಿಸಲು ಮಾಡಿರುವ ಪ್ರಯತ್ನವೇ ಜ್ಞಾನತಾಣ ಕಾರ್ಯಕ್ರಮ.

ಹೀಗೆ ಪ್ರಥಮ ವರ್ಷದಲ್ಲಿ ಜ್ಞಾನತಾಣ ಕಾರ್ಯಕ್ರಮದಲ್ಲಿ ರಾಜ್ಯದ ಸುಮಾರು 1,00,000 ( 1 ಲಕ್ಷ) ವಿದ್ಯಾರ್ಥಿಗಳಿಗೆ ಸೌಲಭ್ಯವು ಲಭ್ಯವಾಗಲಿದ್ದು, ರೂ. 81 ಕೋಟಿ ವಿನಿಯೋಗ ಮಾಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀಮತಿ ದಮಯಂತಿ ಅಧ್ಯಕ್ಷರು ಪಟ್ಟಣ ಪಂಚಾಯತ್ ವಿಟ್ಲ, ಬಂಟ್ವಾಳ ಪತ್ರಕರ್ತರ ಸಂಘದ ಕಾರ್ಯದರ್ಶಿಯಾದ ಮಹಮ್ಮದ್ ಅಲೀ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿಟ್ಲ ವಲಯದ ಮೇಲ್ವಿಚಾರಕರಾದ ರಮೇಶ್‍ರವರು ಸ್ವಾಗತಿಸಿ, ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ನಳಿನಾಕ್ಷಿ ಶೆಟ್ಟಿ ಧನ್ಯವಾದಗೈದರು.

- Advertisement -

Related news

error: Content is protected !!