Thursday, April 25, 2024
spot_imgspot_img
spot_imgspot_img

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ ಸಂಪನ್ನ

- Advertisement -G L Acharya panikkar
- Advertisement -
vtv vitla
vtv vitla
suvarna gold

ವಿಟ್ಲ: ಇಡ್ಕಿದು ಗ್ರಾಮದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಜಾತ್ರೋತ್ಸವವು ಜ.8ರಂದು ಕಿರುಷಷ್ಠಿ ಉತ್ಸವದೊಂದಿಗೆ ಸಂಪನ್ನಗೊಂಡಿತು. ಜ.8ರಂದು ಬೆಳಿಗ್ಗೆ ದೇವರ ಬಲಿ ಹೊರಟು, ದರ್ಶನಬಲಿ, ಬಟ್ಟಲು ಕಾಣಿಕೆ, ಶ್ರೀಗಂಧ ಪ್ರಸಾದ ವಿತರಣೆಗೊಂಡಿತು. ಬಳಿಕ ಸ್ಥಳ ದೈವ ಪಿಲಿಚಾಮುಂಡಿ ನೇಮೋತ್ಸವ ನಡೆದು ಅನ್ನಸಂತರ್ಪಣೆ‌ ನಡೆಯಿತು.

ಪುತ್ತೂರು ಶಾಸಕ ಸಂಜೀವ ಮಠಂದೂರು, ಜಯಕರ್ನಾಟಕ ಜನಪರ ವೇದಿಕೆಯ ಯುವ ಸಂಸ್ಥಾಪಕ ಗುಣರಂಜನ್ ಶೆಟ್ಟಿ ಮೊದಲಾದವರು ಭೇಟಿ ನೀಡಿದರು‌. ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸುರೇಶ್ ಕೆ.ಎಸ್. ಮುಕ್ಕುಡ, ಪಿ. ರಾಜಾರಾಮ ಶೆಟ್ಟಿ ಕೋಲ್ಪೆ ಗುತ್ತು, ರಮೇಶ್ ಭಟ್ ಬಂಡಾರಮನೆ, ಪ್ರಪುಲ್ಲ ಚಂದ್ರ ಪಿ.ಜಿ. ಕೋಲ್ಪೆ, ಮೈಸೂರು ಎಸ್.ಎಲ್.ವಿ. ಬುಕ್ಸ್ ಇಂಡಿಯಾ ಪ್ರೈವೇಟ್ ಲಿ. ಮಾಲಕ ದಿವಾಕರ ದಾಸ್ ನೇರ್ಲಾಜೆ, ಇಡ್ಕಿದು ಗ್ರಾಮ ಪಂಚಾಯತ್ ಅಧ್ಯಕ್ಷ ಎಂ.ಸುಧೀರ್ ಕುಮಾರ್ ಶೆಟ್ಟಿ ಮಿತ್ತೂರು, ವ್ಯವಸ್ಥಾಪನಾ ಸಮಿತಿ ಸದಸ್ಯ ವಿಜಯಕುಮಾರ ಗೌಡ ಸೂರ್ಯ, ಚಂದ್ರಶೇಖರ ಕಂಬಳಿ ಅರ್ಕೆಚ್ಚಾರು, ದೇಜಪ್ಪ ಕೋಲ್ಪೆ, ವಿ.ಕೆ.ಕುಟ್ಟಿ ಉರಿಮಜಲು, ಉಷಾ ಮುಂಡ್ರಬೈಲು,‌ ಶಶಿಪ್ರಭಾ ಮಿತ್ತೂರು ಮೊದಲಾದವರು ಉಪಸ್ಥಿತರಿದ್ದರು.

ಕೋಲ್ಪೆ ಶ್ರೀ ಷಣ್ಮುಖ‌ ಸುಬ್ರಹ್ಮಣ್ಯನಿಗೆ ವರ್ಷಂಪ್ರತಿ ಜಾತ್ರೋತ್ಸವದ ಸಂದರ್ಭದಲ್ಲಿ ಪುಷ್ಪಾಲಂಕಾರದ ಸೇವೆ ನಡೆಸುತ್ತಿರುವವರು ಇಡ್ಕಿದು ಗ್ರಾಮದ ನೇರ್ಲಾಜೆ ದಿ. ರಾಮದಾಸ್ – ದಿ. ಸುಂದರಿ ರಾಮದಾಸ್ ರವರ ಪುತ್ರ ಮೈಸೂರು ಎಸ್.ಎಲ್.ವಿ. ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಮಾಲಕ ದಿವಾಕರ ದಾಸ್ ನೇರ್ಲಾಜೆಯವರು. ಪ್ರತೀವರ್ಷ ಸುಮಾರು ೫ ಲಕ್ಷ ರೂಪಾಯಿ ವೆಚ್ಚದಲ್ಲಿ ಹೂವಿನ ಅಲಂಕಾರದ ಸೇವೆಯನ್ನು ಮಾಡುತ್ತಾ ಬರುತ್ತಿದ್ದಾರೆ. ಪ್ರತೀ ವರ್ಷದಂತೆ ಈ ವರ್ಷವೂ ದೇವಾಲಯ ಹೂವಿನ ಅಲಂಕಾರದಿಂದ ಕಂಗೊಳಿಸುತ್ತಿದೆ‌. ಷಷ್ಠಿಯ ದಿನ ದೇವಾಲಯಕ್ಕೆ ಆಗಮಿಸಿದ ಭಕ್ತಾಧಿಗಳು ಹೂವಿನ ಅಲಂಕಾರವನ್ನು ಕಣ್ತುಂಬಿಸಿಕೊಂಡರು.

- Advertisement -

Related news

error: Content is protected !!