Sunday, April 28, 2024
spot_imgspot_img
spot_imgspot_img

ವಿಟ್ಲ: ಕೋಡಪದವು ಸರ್ಕಾರಿ ಶಾಲೆಯ ದಾಸ್ತಾನು ಕೊಠಡಿ ಮತ್ತು ಮುಖ್ಯ ಶಿಕ್ಷಕರ ಕೊಠಡಿಯ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನ

- Advertisement -G L Acharya panikkar
- Advertisement -

ವಿಟ್ಲ: ಶತಮಾನದ ಹೊಸ್ತಿಲಲ್ಲಿರುವ ದ.ಕ.ಜಿ.ಪಂಚಾಯತ್ ಉನ್ನತೀಕರಿಸಿದ ಶಾಲೆ ಕೋಡಪದವು ಇಲ್ಲಿನ ಆಹಾರ ಸಾಮಾಗ್ರಿಗಳ ದಾಸ್ತಾನು ಕೊಠಡಿ ಮತ್ತು ಮುಖ್ಯ ಶಿಕ್ಷಕರ ಕೊಠಡಿಯ ಬೀಗ ಮುರಿದ ಕಳ್ಳರು ಸೊತ್ತುಗಳಿಗಾಗಿ ಜಾಲಾಡಿದ್ದಾರೆ. ಕೊಠಡಿಯಲ್ಲಿ ಆಹಾರ ಸಾಮಾಗ್ರಿಗಳು ಕಂಡು ಬಂದ ಕಾರಣಕ್ಕಾಗಿ ಮತ್ತೆ ಮುಖ್ಯಶಿಕ್ಷಕರ ಕೊಠಡಿಯೊಳಗೆ ನುಗ್ಗಿದ್ದಾರೆ. ಮುಂದಿನ ತಿಂಗಳು ಉದ್ಘಾಟನೆಗೊಳ್ಳಲಿರುವ ಎರಡು ನೂತನ ಕೊಠಡಿಗಳಿಗೆ ಶಾಲಾ ಹಿತೈಷಿಗಳು, ದಾನಿಗಳು ನೀಡಿರುವ ಬೆಲೆಬಾಳುವ ವಸ್ತುಗಳು, ಟಿ.ವಿ.,ಕಂಪ್ಯೂಟರ್ ಗಳನ್ನು ಕಳವಿಗೆ ಯತ್ನಿಸಿದ್ದಾರೆ. ಆ ಸಂದರ್ಭ ಯಾವುದೋ ವಾಹನ ಅಥವಾ ಇನ್ನಿತರ ಶಬ್ದ ಕೇಳಿಸಿಕೊಂಡ ಕಳ್ಳರು ಸೊತ್ತುಗಳನ್ನು ಚೆಲ್ಲಾಪಿಲ್ಲಿಯಾಗಿ ಅಲ್ಲೇ ಬಿಟ್ಟು ಕಾಲ್ಕಿತ್ತಿರುವುದು ಕಂಡುಬಂದಿದೆ.

ಸೋಮವಾರ ಬೆಳಿಗ್ಗೆ ಎಂದಿನಂತೆ ಶಾಲಾ ಆರಂಭ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಮೋಹಲತಾ ಟೀಚರ್ ಅವರ ಗಮನಕ್ಕೆ ಕಳವು ಯತ್ನ ತಿಳಿದು ತಕ್ಷಣ ಎಸ್.ಡಿ.ಎಂ.ಸಿ ಅಧ್ಯಕ್ಷರ ಮೂಲಕ 112 ಪೊಲೀಸರಿಗೆ ಮಾಹಿತಿ ತಿಳಿಸಿ ನಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ‌. ಅಲ್ಲದೇ ಶಿಕ್ಷಣ ಇಲಾಖೆಗೂ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಕಳ್ಳರ ಕಾಟ ಜಾಸ್ತಿಯಾಗುತ್ತಿದ್ದು ಆರು ತಿಂಗಳ ಮೊದಲು ಸ್ಥಳೀಯ ಶಾಲೆಯ ಹತ್ತಿರ ಇರುವ ಬ್ಯಾಂಕ್ ಕಳವಿಗೆ ಪ್ರಯತ್ನ ನಡೆಸಿರುವ ಬೆನ್ನಲ್ಲೆ ಮತ್ತೆ ಶಾಲೆಗೆ ಕಳ್ಳರು ಲಗ್ಗೆ ಇಟ್ಟಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಸ್ಥಳಕ್ಕೆ ವಿಟ್ಲ ಪೋಲೀಸ್ ಠಾಣಾ ಸಬ್ ಇನ್ಸ್‌ಪೆಕ್ಟರ್ ವಿದ್ಯಾ ಸಹಿತ ಪೊಲೀಸರ ಭೇಟಿ, ಸ್ಥಳ ಪರಿಶೀಲನೆ ನಡೆಸಿ ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಟೆಕ್ನಿಕ್ ಫಾರೂಕ್, ಸ್ಥಳೀಯ ಗ್ರಾ.ಪಂ.ಸದಸ್ಯ ಅರ್ಶದ್ ಕುಕ್ಕಿಲ, ಹಳೆ ವಿದ್ಯಾರ್ಥಿ ಸಂಘದ ಹಸೈನಾರ್ ತಾಳಿತ್ತನೂಜಿ, ಪಾರೂಕ್ ಬೊಣ್ಯಕುಕ್ಕು, ಮುಖ್ಯ ಶಿಕ್ಷಕರಾದ ಮೋಹಲತಾ ಉಪಸ್ಥಿತರಿದ್ದರು.

- Advertisement -

Related news

error: Content is protected !!