Wednesday, July 22, 2026
spot_imgspot_img
spot_imgspot_img

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ – ತುಳು ನಾಟಕ “ಕೊಪ್ಪರಿಗೆ” ಪ್ರದರ್ಶನ

- Advertisement -
- Advertisement -

ಅಂತರರಾಷ್ಟ್ರೀಯ ಈಜುಪಟು ಶ್ರೀಲಕ್ಷ್ಮೀ ಇವರಿಗೆ ಸನ್ಮಾನ

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಹಾಶಿವರಾತ್ರಿ ಆಚರಣೆ ಸಂದರ್ಭದಲ್ಲಿ ಹಿಂದೂ ಯುವಸೇನೆ ವಿಟ್ಲ ಇವರ ವತಿಯಿಂದ ತುಡರ್ ಕಲಾವಿದರು ಕಲ್ಲಡ್ಕ ಇವರಿಂದ ತುಳು ಸಾಮಾಜಿಕ ನಾಟಕ “ಕೊಪ್ಪರಿಗೆ” ಪ್ರದರ್ಶನಗೊಂಡಿತು.

ಕಾರ್ಯಕ್ರಮದಲ್ಲಿ ನಡೆದ ಸಭಾ ಕಾರ್ಯಕ್ರಮ ಹಿಂದೂ ಯುವಸೇನೆ ಅಧ್ಯಕ್ಷ ರಘುಪತಿ ಪೈ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಈಜು ಪಟು ಶ್ರೀಲಕ್ಷ್ಮೀ ಇವರನ್ನು ಸನ್ಮಾನಿಸಲಾಯಿತು.

ಮಂಗಳೂರು ಹಿಂದೂ ಯುವಸೇನೆ ಕೇಂದ್ರೀಯ ಗೌರವಾಧ್ಯಕ್ಷ ಭಾಸ್ಕರಚಂದ್ರ ಶೆಟ್ಟಿ, ಅಧ್ಯಕ್ಷ ಯಶೋಧರ ಚೌಟ, ವಿಟ್ಲ ಬ್ರಹ್ಮಶ್ರೀ ವಿವಿದೊದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ, ಕೃಷ್ಣಯ್ಯ ಕೆ ವಿಟ್ಲ ಅರಮನೆ, ಹಿಂದೂ ಯುವಸೇನೆ ಗೌರವಾಧ್ಯಕ್ಷ ಹರೀಶ್ ವಿಟ್ಲ, ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಹರೀಶ್ ಎ ಕಾರ್ಯಕ್ರಮ ಸಂಯೋಜಿಸಿದರು.

- Advertisement -

Related news

error: Content is protected !!