Saturday, June 13, 2026
spot_imgspot_img
spot_imgspot_img

ವಿಟ್ಲ : ವಿವಾಹಿತ ಮಹಿಳೆ ನಾಪತ್ತೆ

- Advertisement -
- Advertisement -

ವಿಟ್ಲ ನ(11): ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಯಾರಲ್ಲಿಯೂ ಹೇಳದೇ ಹೋದಾಕೆ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಣಿ ಗ್ರಾಮದ ಶಿವಪ್ರಸಾದ್ ನಿಲಯ ನಿವಾಸಿ ಸುಬ್ರಹ್ಮಣ್ಯ ಪ್ರಸಾದ್ ಅವರ ಪತ್ನಿ ಪೂರ್ಣಿಮ(30) ನಾಪತ್ತೆಯಾದ ಮಹಿಳೆ. ಈಕೆಗೆ ಹೆಣ್ಣು ಮಗಳು ಇದ್ದು, ನ.9ರಂದು ಸಂಜೆ 5 ಗಂಟೆಗೆ ಈಕೆ ಮನೆಯಲ್ಲಿ ಯಾರಲ್ಲಿಯೂ ಹೇಳದೇ ಮನೆಯಿಂದ ಹೋದಾಕೆ ಮರಳಿ ಬಂದಿರುವುದಿಲ್ಲ.

ಈ ಬಗ್ಗೆ ಪತಿ ಮಾಹಿತಿ ಪಡೆದು ಮಾಣಿ ಪೇಟೆಯಲ್ಲಿ ವಿಚಾರಿಸಿದಾಗ ಆಕೆ ಬಸ್ಸಿನಲ್ಲಿ ಹಾಸನ ಕಡೆಗೆ ಹೋಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಪತಿ ಸುಬ್ರಹ್ಮಣ್ಯ ಪ್ರಸಾದ್ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆಕೆ ಮೊಬೈಲ್ ಮನೆಯಲ್ಲಿಯೇ ಬಿಟ್ಟು ಹೋಗಿದ್ದು, ಬ್ಯಾಂಕ್ ಪಾಸ್ ಪುಸ್ತಕ, ಚಿನ್ನದ ನೆಕ್ಲೇಸ್ ಹಾಗೂ ಒಂದು ಸಾವಿರ ರೂ. ನಗದು ತೆಗೆದುಕೊಂಡು ಹೋಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈಕೆ ಬಗ್ಗೆ ಮಾಹಿತಿ ಸಿಕ್ಕಿದವರು ವಿಟ್ಲ ಪೊಲೀಸ್ ಠಾಣೆ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!