- Advertisement -
- Advertisement -


ವಿಟ್ಲ: ಇಲ್ಲಿನ ನೀರಕಣಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿಯೊಡೆದ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಕಾರು ಮುಡಿಪಿನಿಂದ ಪೆರ್ಲ ಕಡೆಗೆ ಹೋಗುತ್ತಿದ್ದು, ಈ ವೇಳೆ ನೀರಕಣಿ ಎಂಬಲ್ಲಿ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಗುಡ್ಡಕ್ಕೆ ಡಿಕ್ಕಿ ಹೊಡೆದಿದೆ.

ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದು, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಮಹಿಳೆಯ ತಲೆಯ ಭಾಗಕ್ಕೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.


- Advertisement -