


ವಿಟ್ಲ: ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ನೂತನ ವಿಟ್ಲ ಶಾಖೆಯ ಉದ್ಘಾಟನಾ ಸಮಾರಂಭವು ನ.14 ನೇ ಗುರುವಾರ ಪೂರ್ವಾಹ್ನ 10:00ಕ್ಕೆ ವಿಟ್ಲ ಎಂಪೈರ್ ಮಾಲ್ ಒಂದನೇ ಮಹಡಿಯಲ್ಲಿ ನಡೆಯಲಿದೆ.

ದ.ಕ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ ನೆರವೇರಿಸಲಿದ್ದು, ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ಲಿ, ಪುತ್ತೂರು ಇದರ ಅಧ್ಯಕ್ಷ ಎನ್.ಕಿಶೋರ್ ಕೊಳತ್ತಾಯ ಸಮಾರಂಭದ ಅಧ್ಯಕ್ಷ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭದ್ರತಾ ಕೊಠಡಿ, ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಗಣಕಯಂತ್ರ ಉದ್ಘಾಟಿಸಲಿರುವರು.
ಕ್ಯಾಂಪ್ಕೋ ಲಿ. ಮಾಜಿ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ ಪ್ರಥಮ ಠೇವಣಿ ಪತ್ರ ಹಸ್ತಾಂತರ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಎಸ್. ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು, ದ.ಕ ಜಿಲ್ಲಾ ಸಹಕಾರಿ ಸಂಘಗಳ ಉಪನಿರ್ಬಂಧಕ ರಮೇಶ್, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ , ವಿಟ್ಲ ಅರಮನೆಯ ಬಂಗಾರು ಅರಸರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.








