Friday, June 26, 2026
spot_imgspot_img
spot_imgspot_img

ವಿಟ್ಲ: ಯುವತಿಯ ಮೇಲೆ ಅನ್ಯಕೋಮಿನ ಯುವಕನಿಂದ ಅತ್ಯಾಚಾರ ಯತ್ನ; ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲು!

- Advertisement -
- Advertisement -

ವಿಟ್ಲ: ಬಂಟ್ವಾಳ ತಾಲೂಕಿನ ಕಾಡುಮಠ ಕಡ್ಪಿಕೇರಿ ಯುವತಿಯನ್ನು ಮುಸ್ಲಿಂ ಯುವಕನೊರ್ವ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಗೆ ತೆರಳಿ ಬಲವಂತವಾಗಿ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಯನ್ನು ಸುಮಾರು 30 ವರ್ಷ ವಯಸ್ಸಿನ ಹ್ಯಾರೀಸ್ ಎಂದು ಗುರುತಿಸಲಾಗಿದೆ. ನೊಂದ ಯುವತಿಯ ಮನೆಗೆ ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹಾಗೂ ಕೊಳ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡು ವಿಟ್ಲ ಪೋಲಿಸ್ ಠಾಣೆಗೆ ದೂರು ನೀಡಿ ಪೋಕ್ಸೋ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!