Saturday, October 24, 2026
spot_imgspot_img
spot_imgspot_img

ವಿಟ್ಲ: ಸಾಲೆತ್ತೂರು ಬಳಿ ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಪ್ರಯಾಣಿಕ ಗಂಭೀರ – ಆಸ್ಪತ್ರೆಗೆ ದಾಖಲು

- Advertisement -
- Advertisement -

ವಿಟ್ಲ-ಸಾಲೆತ್ತೂರು-ಮುಡಿಪು-ಮಂಗಳೂರು ಮಧ್ಯೆ ಸಂಚರಿಸುವ APM ಹೆಸರಿನ ಖಾಸಗಿ ಬಸ್‌ನಿಂದ ಅಪರಿಚಿತ ಪ್ರಯಾಣಿಕರೊಬ್ಬರು ಆಯತಪ್ಪಿ ಕೆಳಕ್ಕೆ ಬಿದ್ದು ಪ್ರಜ್ಞಾಹೀನರಾಗಿರುವ ಘಟನೆ ನಡೆದಿದೆ.

ಕುಡ್ತಮುಗೇರು-ಸಾಲೆತ್ತೂರು ನಡುವಿನ ಕಾಡುಮಠ ಶಾಲಾ ಬಳಿ ಬಸ್ ಚಲಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ತಕ್ಷಣ ಸ್ಥಳೀಯರು ಮತ್ತು ಬಸ್ ಸಿಬ್ಬಂದಿ ಗಾಯಾಳುವನ್ನು ಅಂಬ್ಯುಲೆನ್ಸ್ ಮೂಲಕ ವಿಟ್ಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಗಾಯಾಳು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ತೊಕ್ಕೊಟ್ಟುವಿಗೆ ಟಿಕೆಟ್ ಪಡೆದುಕೊಂಡಿದ್ದಾರೆ ಎಂದು ಕಂಡಕ್ಟರ್ ಮಾಹಿತಿ ನೀಡಿದ್ದಾರೆ. ಗಾಯಾಳುವಿನ ಗುರುತು ಪತ್ತೆಯಾಗಿಲ್ಲ. ಅವರ ಪರಿಚಯಸ್ತರು ಅಥವಾ ಸಂಬಂಧಿಕರು ಯಾರಿಗಾದರೂ ಮಾಹಿತಿ ಇದ್ದಲ್ಲಿ ತಕ್ಷಣ ವಿಟ್ಲ ಸರ್ಕಾರಿ ಆಸ್ಪತ್ರೆ ಅಥವಾ ವಿಟ್ಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

- Advertisement -

Related news

error: Content is protected !!