Sunday, May 19, 2024
spot_imgspot_img
spot_imgspot_img

ವಿಟ್ಲ: ನೋ ಪಾರ್ಕಿಂಗ್‌ನಲ್ಲಿ ವಾಹನ ಪಾರ್ಕ್; 27 ದ್ವಿಚಕ್ರ ವಾಹನ ಪೊಲೀಸ್ ವಶಕ್ಕೆ

- Advertisement -G L Acharya panikkar
- Advertisement -

ವಿಟ್ಲ: ಅನಗತ್ಯವಾಗಿ ವಿಟ್ಲ ಪೇಟೆ ಪ್ರವೇಶಿಸಿ ನೋ ಪಾರ್ಕಿಂಗ್ ನಲ್ಲಿ ವಾಹನಗಳನ್ನು ನಿಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ವಾಹನ ದಟ್ಟಣೆಗೆ ಕಾರಣವಾದ ವಾಹನಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆಗೊಳಿಸಿದ್ದರಿಂದ ಇಂದು ಪೇಟೆಯಲ್ಲಿ ಹೆಚ್ಚಿನ ವಾಹನ ದಟ್ಟನೆ ಉಂಟಾಗಿದೆ.

ವಿಟ್ಲ-ಪುತ್ತೂರು ರಸ್ತೆಯ ಎಂಪೈರ್ ಮಾಲ್ ನ ಮುಂಭಾಗ ದ್ವಿಚಕ್ರವಾಹನಗಳನ್ನು ನಿಲ್ಲಿಸಿ ಅದರ ಸವಾರರ ತೆರಳಿದ್ದರು. ಇದರಿಂದ ಪುತ್ತೂರು ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಈ ಬಗ್ಗೆ ಕಾರ್ಯಾಚರಣೆಗೆ ಇಳಿದ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ಪೊಲೀಸರ ತಂಡ ಸುಮಾರು 27 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡು ದಂಡ ವಿಧಿಸಿದ್ದಾರೆ.

ಈ ಕಾರ್ಯಚರಣೆಯಲ್ಲಿ ವಿಟ್ಲ ಪೊಲೀಸ್ ಠಾಣೆಯ ಪ್ರೋಬೆಷನರಿ ಎಸೈ ಮಂಜುನಾಥ, ಎಎಸೈ ಕರುಣಾಕರ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

- Advertisement -

Related news

error: Content is protected !!