Saturday, June 6, 2026
spot_imgspot_img
spot_imgspot_img

ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ಪಂಪ್ ಮುಂಭಾಗ ಪ್ರತಿಭಟನೆ

- Advertisement -
- Advertisement -

ವಿಟ್ಲ: ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಮತ್ತು ತೈಲ ಬೆಲೆ ಏರಿಕೆ ವಿರುದ್ಧ 100 ನಾಟೌಟ್ ಪ್ರತಿಭಟನೆ ವಿಟ್ಲದ ಬೊಬ್ಬೆಕೇರಿ ಪೆಟ್ರೋಲ್ ಪಂಪ್ ಮುಂಭಾಗ ಹಮ್ಮಿಕೊಳ್ಳಲಾಯಿತು.

ಈ ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಎಂ ಎಸ್ ಮಹಮ್ಮದ್ ಮಾತಾನಾಡಿ ಕೊರೊನಾ ಮಹಾಮಾರಿಯಿಂದ ಜನರು ತತ್ತರಿಸಿ ಹೋಗಿರವಾಗ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಮಾಡುವ ಮೂಲಕ ಜನರ ಮೇಲೆ ಮತ್ತಷ್ಟು ಭಾರ ಹೊರಿಸುತ್ತಿದೆ. ಪ್ರಧಾನಿ ಮೋದಿ ತಾನೇ ಬುದ್ಧಿವಂತ ಎಂಬ ಭ್ರಮೆಯಲ್ಲಿದ್ದಾರೆ. ಚುನಾವಣೆ ಸಮಯ ತೈಲ ಬೆಲೆ ಏರಿಕೆ ಮಾಡುವುದಿಲ್ಲ. ಚುನಾವಣೆ ಮುಗಿದ ಬಳಿಕ ತೈಲ ಬೆಲೆ ಏರಿಕೆ ಮಾಡುತ್ತಾರೆ. ಅಂದು ಸೈಕಲ್ ಏರಿ ಪ್ರತಿಭಟನೆ ನಡೆಸಿದವರು ಇಂದು ನಾಪತ್ತೆಯಾಗಿದ್ದಾರೆ ಎಂದು ಕಿಡಿ ಕಾರಿದರು.

ಈ ವೇಳೆ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಪ್ರವೀಣ್ ಚಂದ್ರ ಆಳ್ವ, ವಕ್ತಾರ ರಮಾನಾಥ ರೈಮ ನಗರ ಕಾಂಗ್ರೆಸ್ ಅಧ್ಯಕ್ಷ ಅಶ್ರಫ್ ವಿಕೆಎಂ, ಪಟ್ಟಣ ಪಂಚಾಯತ್ ಸದಸ್ಯ ಹಸೈನಾರ್ ನೆಲ್ಲಿಗುಡ್ಡೆ, ಎಸ್ ಕೆ ಮಹಮ್ಮದ್, ಶ್ರೀನಿವಾಸ್ ಶೆಟ್ಟಿ ಕೊಲ್ಯ, ಶೇಖ್ ಆಲಿ ಸೇರಾಜೆ, ಅಬ್ದುಲ್ ರಹಿಮಾನ್ ಕುರಂಬಳ, ಎಂ ಕೆ ಮೂಸಾ, ಪೆಉವಾಯಿ ಗ್ರಾಂ. ಪಂ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ರಾಲ್ಫ್ ಡಿಸೋಜಾ, ಅಶೋಕ್ ಡಿಸೋಜಾ, ಸುಧಾಕರ್ ಅಳಿಕೆ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!