Sunday, May 5, 2024
spot_imgspot_img
spot_imgspot_img

ವಿಟ್ಲದಲ್ಲಿ ತಲೆ ಎತ್ತಲಿದೆ ಸರ್ಕಾರಿ ಪದವಿಪೂರ್ವ ಕಾಲೇಜು

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಒಟ್ಟು 29 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮಂಜೂರಾತಿ ನೀಡಿ ಆದೇಶ ಹೊರಡಿಸಿದೆ. ಈ ಪೈಕಿ 2 ಕಾಲೇಜುಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭವಾಗಲಿದೆ.

ವಿಟ್ಲದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲೂ ಪದವಿ ಪೂರ್ವ ಕಾಲೇಜು ಆರಂಭಿಸಲು ರಾಜ್ಯ ಸರ್ಕಾರ ಮಂಜೂರಾತಿ ನೀಡಿ ಆದೇಶ ಹೊರಡಿಸಿದೆ. ಈ ಸುದ್ದಿ ವಿಟ್ಲದ ಜನತೆಗೆ ಖುಷಿ ತಂದಿದೆ

ರಾಜ್ಯದ ಕೆಲ ಪ್ರೌಢ ಶಾಲೆಗಳನ್ನು ಉನ್ನತೀಕರಿಸಿ ಅವುಗಳನ್ನು ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಾಗಿ ಪ್ರಾರಂಭಿಸಲು ಸರ್ಕಾರ ಮುಂದಾಗಿತ್ತು. ಇದರ ಭಾಗವಾಗಿ 29 ಹೊಸ ಪಿಯು ಕಾಲೇಜುಗಳನ್ನು ಮಂಜೂರು ಮಾಡಿದೆ. ಈ ಎಲ್ಲ ಕಾಲೇಜುಗಳಲ್ಲಿ 2023-24ನೇ ಸಾಲಿನಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!