Monday, May 20, 2024
spot_imgspot_img
spot_imgspot_img

ವಿಟ್ಲ: ವಿಟಿವಿ ವರದಿಗೆ ಸ್ಪಂದಿಸಿದ ಪಟ್ಟಣ ಪಂಚಾಯತ್; ಕೊಳವೆ ಬಾವಿಗೆ ಪಂಪ್‌ ಅಳವಡಿಕೆ

- Advertisement -G L Acharya panikkar
- Advertisement -

ವಿಟ್ಲ: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 2ನೇ ವಾರ್ಡ್ ಪೊನ್ನೋಟ್ಟು ಪರಿಸರದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಟ ನಡೆಸುತ್ತಿದ್ದು, ಸಂತೆ ರಸ್ತೆಯಲ್ಲಿ ಕೊಳವೆ ಬಾವಿ ಇದ್ದರೂ ಇದುವರೆಗೂ ಪಂಚಾಯತ್ ಪಂಪ್ ಅಳವಡಿಸದೇ ನಿರ್ಲಕ್ಷ್ಯ ವಹಿಸಿದ್ದು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮತದಾನ ಬಹಿಷ್ಕಾರಕ್ಕೆ ಸಿದ್ಧವಾಗಿದ್ದರು. ಈ ಬಗ್ಗೆ ವಿಟಿವಿ ಮಾಧ್ಯಮದಲ್ಲಿ ವರದಿ ಪ್ರಕಟಣೆಯಾಗಿತ್ತು.


ವಿಟಿವಿ ಮಾಧ್ಯಮ ವರದಿ ಭಿತ್ತರಿಸಿದ ಕೆಲವೇ ಹೊತ್ತಿನಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದು, 2ನೇ ವಾರ್ಡ್ ಪೊನ್ನೋಟ್ಟು ಪರಿಸರದಲ್ಲಿ ಕೊಳವೆ ಬಾವಿಗಳಿಗೆ ಪಂಪ್‌ ಅಳವಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕೊಳವೆ ಬಾವಿಗಳ ದುರಸ್ಥಿ ಕಾರ್ಯ ವೈಖರಿಗಳು ನಡೆಯುತ್ತಿದೆ.

- Advertisement -

Related news

error: Content is protected !!