Sunday, June 14, 2026
spot_imgspot_img
spot_imgspot_img

ವಿಟ್ಲ: ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಮಹಾತ್ಮ ಗಾಂಧಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

- Advertisement -
- Advertisement -

ವಿಟ್ಲ: ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಇಲ್ಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆ ಮತ್ತು ಮೌನ ಪ್ರಾರ್ಥನೆಯನ್ನು ಮಾಡಿದರು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರಿಗೆ ಪುಷ್ಪನಮನ ಸಲ್ಲಿಸಿದರು.

ಸ್ವಚ್ಛತಾ ಆಂದೋಲನದಲ್ಲಿ ಶಾಲೆಯ ಪರಿಸರದ ಸ್ವಚ್ಚತೆಯಲ್ಲಿ ಪಾಲ್ಗೊಂಡ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉತ್ಸಾಹದಿಂದ ಶ್ರಮದಾನ ಹಾಗೂ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

- Advertisement -

Related news

error: Content is protected !!