Saturday, April 20, 2024
spot_imgspot_img
spot_imgspot_img

ವಿಟ್ಲ: ಎಸ್ ಡಿ ಪಿ ಐ ಕಚೇರಿಗೆ ಬೆಂಕಿ !

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ ವಲಯ ಎಸ್ ಡಿ ಪಿ ಐ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಘಟನೆ ವಿಟ್ಲದ ಮೇಗಿನಪೇಟೆಯಲ್ಲಿ ನಡೆದಿದೆ.

ಸೋಮವಾರ ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಭಾನುವಾರ ರಾತ್ರಿ ಈ ಕೃತ್ಯ ನಡೆದಿದೆನ್ನಲಾಗಿದೆ. ಕಚೇರಿಯ ಮುಂಭಾಗದ ಬಾಗಿಲಿನ ಭಾಗಕ್ಕೆ ಬೆಂಕಿ ಹಚ್ಚಿದ್ದು, ಸ್ಥಳದಲ್ಲಿ ಪೈಂಟ್ ಡಬ್ಬಗಳು ಪತ್ತೆಯಾಗಿದ್ದು, ಪೈಂಟ್ ಹಚ್ಚಿ ಬೆಂಕಿ ಹಾಕಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಇದರಿಂದ ಕಚೇರಿಯ ಮುಂಭಾಗ ಹಾನಿಗೊಂಡಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ ಡಿ ಪಿ ಐ ಮುಖಂಡರು ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ವಿಟ್ಲ ಎಸ್‌ಡಿಪಿಐ ಕಛೇರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸಲು ಆಗ್ರಹಿಸಿ ವಿಟ್ಲ ಮೇಗಿನ ಪೇಟೆಯ ಸದ್ರಿ ಕಛೇರಿಯ ಮುಂಭಾಗದಲ್ಲಿ 09.30 ಘಂಟೆಗೆ ಪ್ರತಿಭಟನೆ ನಡೆಯಲಿದೆ ಎಂದು
ಎಸ್ ಡಿ ಪಿ ಐ ವಿಟ್ಲ ವಲಯ ಸಮಿತಿ ತಿಳಿಸಿದೆ.

- Advertisement -

Related news

error: Content is protected !!