- Advertisement -
- Advertisement -



ವಿಟ್ಲ: ಬಸ್ಸಿನಲ್ಲಿ ಪರಿಚಿತನಾದ ಅಪ್ರಾಪ್ತ ಬಾಲಕನನ್ನು ಪುಸಲಾಯಿಸಿ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿಟ್ಲ ಪಡ್ನೂರು ಗ್ರಾಮದ ಕಾಪುಮಜಲು ಕೋಡಿ ನಿವಾಸಿಯಾದ ಆರೋಪಿ ಈ ಹಿಂದೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನಾಗಿ ಕೆಲಸ ಮಾಡಿದ್ದು, ಪ್ರಸ್ತುತ ಕೃಷಿ ಕೆಲಸದಲ್ಲಿ ತೊಡಗಿದ್ದಾನೆ ಎಂದು ತಿಳಿದುಬಂದಿದೆ. ವಿವಾಹಿತನಾದ ಆರೋಪಿಗೆ ಇಬ್ಬರು ಮಕ್ಕಳಿದ್ದಾರೆ.
ಬಸ್ಸಿನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕನನ್ನು ಪುಸಲಾಯಿಸಿ ಲೈಂಗಿಕ ಕೃತ್ಯ ಎಸಗಿದ ಆರೋಪದ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಕಾಪುಮಜಲು ಎಂಬಲ್ಲಿ ಬಂಟರ ಸಂಘದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಆರಂಭದಲ್ಲಿ ಬಂಧನ ಸಾಧ್ಯವಾಗಿರಲಿಲ್ಲ. ಕಾರ್ಯಕ್ರಮ ಮುಗಿದ ನಂತರ ವಿಟ್ಲ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಮುಂದಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
- Advertisement -








