Thursday, June 18, 2026
spot_imgspot_img
spot_imgspot_img

ವಿಟ್ಲ ಠಾಣಾ ಉಪನಿರೀಕ್ಷಕ ವಿನೋದ್ ಕುಮಾರ್ ರೆಡ್ಡಿ ಮತ್ತು ತಂಡಕ್ಕೆ ಅಭಿನಂದನೆ

- Advertisement -
- Advertisement -

ವಿಟ್ಲ: ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ವಿಟ್ಲ ಮೇಗಿನಪೇಟೆಯ ಒಂಟಿ ಮಹಿಳೆಯನ್ನು ಕಟ್ಟಿಹಾಕಿ ಹಲ್ಲೆ ನಡೆಸಿ ದರೋಡೆ ನಡೆಸಿ ಪರಾರಿಯಾಗಿದ್ದ ಅರೋಪಿಯನ್ನು ಅತೀ ಶೀಘ್ರವಾಗಿ ಬಂಧಿಸುವಲ್ಲಿ ಕಾರ್ಯನಿರ್ವಹಿಸಿದ ವಿಟ್ಲ ಠಾಣಾ ಪೊಲೀಸ್ ಉಪನಿರೀಕ್ಷಕರಾದ ವಿನೋದ್ ಕುಮಾರ್ ರೆಡ್ಡಿ ಅವರನ್ನು ಹಾಗೂ ಪೊಲೀಸ್ ತಂಡವನ್ನು ಅಭಿನಂದಿಸಿ ಗೌರವಿಸಲಾಯಿತು.

ವಿಟ್ಲ ಸಮೀಪದ ಮೇಗಿನಪೇಟೆ ಎಂಬಲ್ಲಿ ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿ ಹಲ್ಲೆ ನಡೆಸಿ, ಕೈಕಾಲು ಕಟ್ಟಿ ಹಾಕಿ ದರೋಡೆಗೆ ಯತ್ನಿಸಿದ ಪ್ರಕರಣವು ನಡೆದಿತ್ತು. ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆಗೆ ಯತ್ನ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಶೀಘ್ರವಾಗಿ ಬಂಧಿಸುವಲ್ಲಿ ಯಶಸ್ವಿಯಾದರು.

ಅಭಿನಂದನಾ ಸಂಧರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ವಿಟ್ಲ ಅಧ್ಯಕ್ಷರಾದ ಅರುಣ್ ವಿಟ್ಲ, ಪ್ರಭಾರಿ ಮೋಹನ್ ದಾಸ್ ಉಕ್ಕುಡ, ಕಾರ್ಯದರ್ಶಿ ಕರುಣಾಕರ ನಾಯ್ತೋಟು, ಪ್ರಮುಖರಾದ ರಾಮ್ ದಾಸ್ ಶೆಣೈ ವಿಟ್ಲ, ಹರೀಶ್ ವಿಟ್ಲ, ಕೃಷ್ಣ ಮುದೂರು ಉಪಸ್ಥಿತರಿದ್ದರು.

- Advertisement -

Related news

error: Content is protected !!